Sunday, November 24, 2024
ಸುದ್ದಿ

ವಿಟ್ಲ: ಗುಡ್ಡ ಕುಸಿದು ಸಾವನ್ನಪ್ಪಿದ ಕುಟುಂಬಕ್ಕೆ 3 ಲಕ್ಷ ರೂ ಮುಖ್ಯಮಂತ್ರಿ ಘೋಷಣೆ- ಕಹಳೆ ನ್ಯೂಸ್

ವಿಟ್ಲ: ಒಡಿಯೂರಿನಲ್ಲಿ ನಡೆದ ದುರ್ಘ‌ಟನೆಯ ಬಗ್ಗೆ ಮಾಹಿತಿ ಪಡೆದುಕೊಂಡ ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಮುಖ್ಯ ಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ಹಾಗೂ ಗಾಯಗೊಂಡ ವ್ಯಕ್ತಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ರವಿವಾರ ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್‌ ನಾ„ಕ್‌ ಉಳಿಪ್ಪಾಡಿಗುತ್ತು, ಪುತ್ತೂರು ಶಾಸಕ ಸಂಜೀವ ಮಠಂದೂರು, ಸಾಜ ರಾಧಾಕೃಷ್ಣ ಆಳ್ವ, ವಿಟ್ಲಪಟ್ನೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ರವೀಶ್‌ ಶೆಟ್ಟಿ ಕರ್ಕಳ, ಮಾಣಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಅಭಿಷೇಕ್‌ ರೈ, ಕನ್ಯಾನ ಬಿಜೆಪಿ ಮುಖಂಡ ಕೆ. ಪಿ.ರಘುರಾಮ ಶೆಟ್ಟಿ ಮತ್ತಿತರರು ಭೇಟಿ ನೀಡಿದರು. ಬಂಟ್ವಾಳ ಶಾಸಕ ರಾಜೇಶ್‌ ನಾ„ಕ್‌ ಉಳಿಪ್ಪಾಡಿಗುತ್ತು ಅವರು ಕಾಪುಮಜಲು ರಮೇಶ್‌ ಮಡಿವಾಳ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯ ಮಂತ್ರಿಗಳಿಗೆ ಮನವಿ:
ಘಟನೆಯಲ್ಲಿ ಸಾವನ್ನಪ್ಪಿದ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್‌ ನಾ„ಕ್‌ ಉಳಿಪ್ಪಾಡಿಗುತ್ತು ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮೂಲಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ದೇಹಗಳ ಹಸ್ತಾಂತರ:
ಮೃತ ದೇಹವನ್ನು ಮಣ್ಣಿನಿಂದ ಹೊರ ತೆಗೆದು ದೇರಳಕಟ್ಟೆ ಆಸ್ಪತ್ರೆಗೆ ಶನಿವಾರ ವರ್ಗಾಯಿಸಲಾಗಿತ್ತು. ರವಿವಾರ ಬೆಳಗ್ಗೆ ದೇರಳಕಟ್ಟೆ ಕೆ.ಎಸ್‌.ಹೆಗ್ಡೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯನ್ನು ನಡೆಸಿ ಮೃತ ದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.