Monday, January 20, 2025
ಸುದ್ದಿ

BREAKING NEWS:ಕಾಂಗ್ರೆಸ್ ಹೀನಾಯ ಸೋಲು: ಸೋಲಿನ ಹೊಣೆ ಹೊತ್ತು ವಿಪಕ್ಷ ಸ್ಥಾನಕ್ಕೆ ಸಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ರಾಜಿನಾಮೆ ನಿರ್ಧಾರ-ಕಹಳೆ ನ್ಯೂಸ್

ಬೆಂಗಳೂರು: 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಈ ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತು ವಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಅವರು ಸೋಲಿನ ಹೊಣೆ ಹೊತ್ತು ರಾಜಿನಾಮೆ ಪತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಗೆ ರವಾನಿಸಿದ್ದಾರೆ ಎನ್ನಲಾಗಿದೆ. ಆದರೆ ಹೈಕಮಾಂಡ್ ಆತುರದ ನಿರ್ಧಾರ ಬೇಡ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಉಪ ಚುನಾವಣೆ ಸಂಬಂಧ ಸಿದ್ದರಾಮಯ್ಯ ಅವರು 3.30ಕ್ಕೆ ಸುದ್ದಿಗೋಷ್ಠಿ ನಡೆಸಿದರೇ ಸಂಜೆ 4ಕ್ಕೆ ದಿನೇಶ್ ಗಂಡೂರಾವ್ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಶಿವಾಜಿನಗರ ಮತ್ತು ಹುಣಸೂರು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಇನ್ನು ಬಿಜೆಪಿ 12 ಕ್ಷೇತ್ರದಲ್ಲಿ ಗೆಲುವು ಸಾಧಿಸಿದರೆ ಹೊಸಕೋಟೆ ಕ್ಷೇತ್ರದಿಂದ ಪಕ್ಷೇತ್ತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ಗೆದ್ದು ಬೀಗಿದ್ದಾರೆ.