Sunday, November 24, 2024
ಸುದ್ದಿ

ಬಿಗ್ ಬ್ರೇಕಿಂಗ್ : ಉಪ ಚುನಾವಣೆ ಸೋಲಿನ ಹೊಣೆ ಹೊತ್ತು, ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮಾತ್ರವೇ ಗೆಲುವ ಸಾಧಿಸಿದೆ. ಹೀಗಾಗಿ ಪಕ್ಷದ ಸೋಲಿನ ಹೊಣೆ ಹೊತ್ತು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ದಿಢೀರ್ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಗೆ ರವಾನಿಸಿದ್ದಾರೆ.

ಬೆಂಗಳೂರು, ಡಿ.9-ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನೈತಿಕ ಹೊಣೆ ಹೊತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಫಲಿತಾಂಶ ಪ್ರಕಟಗೊಂಡ ನಂತರ ಇಂದು ಮಧ್ಯಾಹ್ನ ತಮ್ಮ ಸರ್ಕಾರಿ ಬಂಗಲೆ ಕಾವೇರಿಯಲ್ಲಿ ತುರ್ತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ವ್ಯಕ್ತಿ ನಾನು. 15 ಕ್ಷೇತ್ರಗಳಲ್ಲಿ ಜನ ಕೊಟ್ಟಿರುವ ತೀರ್ಪನ್ನು ಗೌರವಿಸುತ್ತೇನೆ ಮತ್ತು ಒಪ್ಪಿಕೊಂಡಿದ್ದೇನೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪಕ್ಷಾಂತರ ಮಾಡಿ ಹೋದ ಶಾಸಕರಿಗೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ. ಶಾಸಕಾಂಗ ಪಕ್ಷದ ನಾಯಕನಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವ ದೃಷ್ಟಿಯಿಂದ ನಾನು ಶಾಸಕಾಂಗ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಘೋಷಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯೆಕ್ಷೆ ಸೋನಿಯಾಗಾಂಧಿ, ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಅವರಿಗೆ ರವಾನಿಸಿರುವುದಾಗಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸ್ಪೀಕರ್ ರಮೇಶ್‍ಕುಮಾರ್, ವಿಧಾನಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ನಜೀರ್ ಅಹಮ್ಮದ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮತ್ತಿತರರು ಹಾಜರಿದ್ದರು.

ನಿಗೂಢವಾದ ನಡೆ:
ಸಿದ್ದರಾಮಯ್ಯ ಅವರ ರಾಜೀನಾಮೆ ಕಾಂಗ್ರೆಸ್‍ನಲ್ಲಿ ಹಲವಾರು ರೀತಿಯ ಚರ್ಚೆಗಳಿಗೆ ಕಾರಣವಾಗಿದೆ. ಸೋಲಿನ ಹೊಣೆಯನ್ನು ಸಿದ್ದರಾಮಯ್ಯ ಹೊರಬೇಕು, ರಾಜೀನಾಮೆ ನೀಡಬೇಕು ಎಂಬ ಬೇಡಿಕೆಗಳು ಕೇಳಿ ಬರುವ ಮೊದಲೇ ಹುದ್ದೆ ತ್ಯಾಗ ಮಾಡುವ ಮೂಲಕ ಸಿದ್ದರಾಮಯ್ಯ ಹೊಸ ದಾಳ ಉರುಳಿಸಿದ್ದಾರೆ.

ಈ ಮೂಲಕ ಕಾಂಗ್ರೆಸ್‍ನಲ್ಲಿ ತಮ್ಮ ನಾಯಕತ್ವದ ವಿರುದ್ಧ ಕೇಳಿ ಬರಬಹುದಾದ ಅಪಸ್ವರಗಳಿಗೆ ಆರಂಭದಲ್ಲೇ ಕೌಂಟರ್ ರಿಯಾಕ್ಷನ್ ಮಾಡಿದ್ದಾರೆ. ಪಕ್ಷ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಒಪ್ಪಿಕೊಳ್ಳಬೇಕೇ, ಬೇಡವೇ ಎಂಬ ಗೊಂದಲ ಹೈಕಮಾಂಡ್‍ನ್ನು ಕಾಡುತ್ತಿದೆ.

ಒಂದು ವೇಳೆ ರಾಜೀನಾಮೆ ಒಪ್ಪಿಕೊಂಡಿದ್ದೇ ಆದರೆ ಪರ್ಯಾಯ ನಾಯಕ ಯಾರು ಎಂಬ ಚರ್ಚೆಯೂ ಪ್ರಶ್ನಾರ್ಹವಾಗಿದೆ. ಇಲ್ಲದೆ ಹೋದರೆ ಸಿದ್ದರಾಮಯ್ಯ ಅವರನ್ನೇ ಮುಂದುವರೆಸಿದರೆ ಮೂಲಕಾಂಗ್ರೆಸ್ಸಿಗರು ಅಸಮಾಧಾನಗೊಳ್ಳುವ ಸಾಧ್ಯತೆ ಇದೆ.

ಇತ್ತ ಮೂಲ ಕಾಂಗ್ರೆಸ್‍ನವರನ್ನು ಸಮಾಧಾನಪಡಿಸಬೇಕೋ, ಸಿದ್ದರಾಮಯ್ಯ ಅವರನ್ನು ಮನವೊಲಿಸಬೇಕೋ ಎಂಬ ಗೊಂದಲ ಕಾಂಗ್ರೆಸ್ ಹೈಕಮಾಂಡ್‍ನ್ನು ಕಾಡುತ್ತಿದೆ.
ಮುಂದೆ ಒದಗಬಹುದಾದ ರಾಜಕೀಯ ಅಪಾಯಗಳನ್ನು ಅರಿತುಕೊಂಡ ಸಿದ್ದರಾಮಯ್ಯ ಅತ್ಯಂತ ಜಾಣ ನಡೆಯನ್ನು ಅನುಸರಿಸಿದ್ದಾರೆ.