Monday, January 20, 2025
ಸುದ್ದಿ

BREAKING NEWS : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಘೋಷಣೆ-ಕಹಳೆ ನ್ಯೂಸ್

ಬೆಂಗಳೂರು : ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಸೋಲಿನ ಹಿನ್ನೆಲೆಯಲ್ಲಿ ನೈತಿಕ ಹಾಗೂ ರಾಜಕೀಯ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಉಪಚುನಾವಣೆ ಸೇರಿದಂತೆ ಹಲವು ಸಂದರ್ಭಗಳಲ್ಲಿ ನಾನು ಶಕ್ತಿಮೀರಿ ಪ್ರಯತ್ನ ಪಟ್ಟಿದ್ದೇನೆ. ನನ್ನ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ವೇಣುಗೋಪಾಲ್ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದರು.

ಉಪಚುನಾವಣೆಯಲ್ಲಿ ಜನತಾ ನ್ಯಾಯಾಲಯ ಒಳ್ಳೆಯ ತೀರ್ಪು ನೀಡಲಿದೆ ಎಂದು ಭಾವಿಸಿದ್ದೆವು. ಪಕ್ಷ ಬಿಟ್ಟು, ಪಕ್ಷಕ್ಕೆ ಅನ್ಯಾಯ ಮಾಡಿ ಹೋದವರಿಗೆ ಜನತಾ ನ್ಯಾಯಾಲಯ ಒಳ್ಳೆಯ ತೀರ್ಪು ನೀಡಲಿದೆ ಎಂದು ಕೊಂಡಿದ್ದೆವು. ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಎಲ್ಲವನ್ನೂ ಪಕ್ಷದ ಮುಖಂಡರು, ನಾಯಕರ ಅಭಿಪ್ರಾಯ ಸಂಗ್ರಹಿಸಿ ನಿರ್ವಹಿಸಿದ್ದೆವು. ಪಕ್ಷದ ಎಲ್ಲ ನಾಯಕರು, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಎಲ್ಲ ನಾಯಕರು ಶಕ್ತಿಮೀರಿ ಉಪಚುನಾವಣೆಗೆ ಶ್ರಮಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಅಂತಿಮವಾಗಿ ಪ್ರಜಾಪ್ರಭುತ್ವದ ಮಹತ್ವ ಎಂದರೆ, ಪ್ರಜೆಗಳು ಬಯಸುವುದೇ ಅಂತಿಮ ತೀರ್ಪು. ಅದಕ್ಕೆ ನಾವು ಪ್ರಜಾತೀರ್ಪನ್ನು ಖಂಡಿತ ಗೌರವಿಸುತ್ತೇವೆ. ನಾವು ಅದನ್ನು ತಪ್ಪಾಗಿ ಗ್ರಹಿಸುವುದಿಲ್ಲ. ನಾವು ಬೇರೆ ಅಪೇಕ್ಷಿಸಿದ್ದೆವು. ಆದರೆ, ಜನರ ತೀರ್ಪೇ ಬೇರೆ ಆಗಿದೆ. ಕಾಂಗ್ರೆಸ್ ನಿಂದ ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಇದೇ ವೇಳೆ, ಗೆಲುವು ಸಾಧಿಸಿರುವ ಬಿಜೆಪಿಯ ಅಭ್ಯರ್ಥಿಗಳು, ಪಕ್ಷೇತರ ಅಭ್ಯರ್ಥಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಲೋಕಸಭಾ ಚುನಾವಣೆಯಲ್ಲೂ ನಾನೇ ಕೆಪಿಸಿಸಿ ಅಧ್ಯಕ್ಷನಾಗಿದ್ದೇ. ಅಂದು ಮೈತ್ರಿ ಚುನಾವಣೆಯಾಗಿದ್ದರಿಂದ ನಾನು ತೀರ್ಮಾನ ಕೈಗೊಂಡಿರಲಿಲ್ಲ. ಪ್ರತಿಯೊಂದು ಹಂತದಲ್ಲೂ ಎಐಸಿಸಿ ಅವರು ಕೆಪಿಸಿಸಿ ಮೇಲೆ ಸಂಪೂರ್ಣ ವಿಶ್ವಾಸ ಇಟ್ಟಿದ್ದರು. ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಎಲ್ಲ ವಿಚಾರಗಳಲ್ಲೂ ಮುಕ್ತ ಸಹಕಾರ ನೀಡಿದ್ದರು. ಹೈಕಮಾಂಡ್ ನವರು ಎಲ್ಲಿಯೂ ಮಧ್ಯಪ್ರವೇಶ ಮಾಡಿರಲಿಲ್ಲ. ಹೀಗಾಗಿ ನನ್ನ ನೈತಿಕ ಹಾಗೂ ರಾಜಕೀಯ ಜವಾಬ್ದಾರಿ ಇದೆ. ಈ ಸಂದರ್ಭ ನಾನು ಸಹ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು.