Recent Posts

Monday, January 20, 2025
ಸುದ್ದಿ

ಬಂಟ್ವಾಳ ಬಿಜೆಪಿ ಮಾಜಿ ಕ್ಷೇತ್ರಾಧ್ಯಕ್ಷ ಜಿ.ಆನಂದ ನಿಧನ-ಕಹಳೆ ನ್ಯೂಸ್

ಬಂಟ್ವಾಳ, ಡಿ.10: ಬಂಟ್ವಾಳ ಬಿಜೆಪಿ ಮಾಜಿ ಕ್ಷೇತ್ರಾಧ್ಯಕ್ಷ ಜಿ.ಆನಂದ (70) ಮಂಗಳವಾರ ಮುಂಜಾನೆ 1.30ರ ಸುಮಾರಿಗೆ ನಿಧನ ಹೊಂದಿದರು.

ಬಂಟ್ವಾಳ ವ್ಯವಸಾಯ ಸೇವಾ ಸಹಕಾರ ಸಂಘ ಅಧ್ಯಕ್ಷರಾಗಿದ್ದ ಅವರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿದ್ದರು. ವೀಣಾಧಾರಿಣಿ ಕಲಾ ಯುವಕ ಸಂಘ, ಸ್ಟೇಟ್ ಟೈಲರ್ ಅಸೋಸಿಯೇಶನ್, ಸ್ಥಳೀಯ ಕಲ್ಲುರ್ಟಿ ಸನ್ನಿಧಿ ಸಹಿತ ಹಲವು ಸಂಘಸಂಸ್ಥೆಗಳಲ್ಲಿ ಅವರು ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಜಿ.ಆನಂದ ನಿಧನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಬಿಜೆಪಿ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು