ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ತಾಯಿ ಮೇಲೆಯೇ ಹಲವು ಬಾರಿ ಅತ್ಯಾಚಾರ ಎಸಗಿದ್ದ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆಯ ಪತಿ 7 ವರ್ಷಗಳ ಹಿಂದೆ ಮೃತಪಟ್ಟಿದ್ದು, ಕುಟುಂಬ ನಿರ್ವಹಣೆಗಾಗಿ ಮಹಿಳೆ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆಗೆ ದಿನಾಲು ಕುಡಿದು ಬರುತ್ತಿದ್ದ ಆಕೆಯ 20 ವರ್ಷದ ಪುತ್ರ ಮದ್ಯ ಸೇವಿಸಲು ಹಣ ಕೊಡುವಂತೆ ಪೀಡಿಸುತ್ತಿದ್ದ. ಸಂತ್ರಸ್ತೆ ನಿರಾಕರಿಸಿದಾಗ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದಾನೆ.
ಕಳೆದ 3 ತಿಂಗಳ ಅವಧಿಯಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಮಹಿಳೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.