ಗುವಾಹತಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ಭಾರತದಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಅಸ್ಸಾಂನ ಗುವಾಹತಿ ಮತ್ತು ದಿಬ್ರೂಗಢ್ ನಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನು ಸಡಿಲಿಸಲಾಗಿದೆ.
ದಿಬ್ರೂಗಢ್ ಮತ್ತು ಗುವಾಹತಿಯಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಕರ್ಫ್ಯೂ ಸಡಿಲಿಸಲಾಗಿದ್ದು, ಪೂರ್ವ ದಿಬ್ರೂಘಡ್, ನಹಾರ್ ಕಟಿಯಾ, ಟೆನಾಟ್ ಮತ್ತು ಇತರೆ ಪ್ರದೇಶಗಳಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನು ಸಡಿಲಿಸಲಾಗಿದೆ. ಕರ್ಫ್ಯೂ ಸಡಿಲಿಸಿದ ಪರಿಣಾಮ ಅಂಗಡಿಗಳು ತೆರೆದಿದ್ದು, ಜನರು ಹೊರ ಬಂದು ವಸ್ತುಗಳ ಖರೀದಿ ಮಾಡುತ್ತಿದ್ದಾರೆ.
ಶನಿವಾರವೂ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದ್ದು, ಅಸ್ಸಾಂನಲ್ಲಿ ಇಂಧನ ಟ್ಯಾಂಕರ್‌ಗೆ ಬೆಂಕಿ ಹಚ್ಚಲಾಗಿದ್ದು, ಈ ವೇಳೆ ಚಾಲಕ ಮೃತಪಟ್ಟಿದ್ದಾನೆ. ಇಂಟರ್ನೆಟ್ ಸೇವೆ ಸ್ಥಗಿತವನ್ನು ಸೋಮವಾರದವರೆಗೆ ವಿಸ್ತರಿಸಲಾಗಿದೆ.