ನವದೆಹಲಿ : ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಹಿಂಸಾಚಾರ ಘಟನೆಗಳು ವರದಿಯಾಗಿವೆ. ಬೆಳಗ್ಗೆಯಿಂದ ಶಾಂತವಾಗಿಯೇ ಇದ್ದ ಪ್ರತಿಭಟನೆ ಸಂಜೆಯ ವೇಳೆಗೆ ಹಿಂಸಾರೂಪ ಪಡೆದಿದ್ದು, ಉದ್ರಿಕ್ತರ ಗುಂಪು ನಾಲ್ಕು ಬಸ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ದಕ್ಷಿಣ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಯುನಿವರ್ಸಿಟಿ ಹಾಗೂ ಭಾರತ್ ನಗರ ಬಳಿ ಪ್ರತಿಭಟನಾಕಾರರು ದೆಹಲಿ ಸಾರಿಗೆಯ ಬಸ್ಗಳಿಗೆ ಬೆಂಕಿ ಹಚ್ಚಿ ಸಿಟ್ಟು ಹೊರಹಾಕಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದರು. ಜೊತೆಗೆ ಅಶ್ರವಾಯು ಬಳಸಿ ಪ್ರತಿಭಟನಾಕಾರರನ್ನು ಚದುರಿಸಲು ಮುಂದಾದರು. ಈ ವೇಳೆ, ಉದ್ರಿಕ್ತರ ಗುಂಪು ಪೊಲೀಸರ ವಿರುದ್ಧವೇ ಕಲ್ಲು ತೂರಾಟ ನಡೆಸಿದರು. ಇನ್ನು ಅಗ್ನಿಶಾಮಕ ಸಿಬ್ಬಂದಿಯ ಮೇಲೂ ಪ್ರತಿಭಟನಾನಿರತರು ಹಲ್ಲೆ ನಡೆಸಿದ್ದಾರೆ.
ಇನ್ನು ಪ್ರತಿಭಟನಾಕಾರರ ಅಗ್ನಿಜ್ವಾಲೆಯಿಂದ ಹೊತ್ತಿ ಉರಿಯುತ್ತಿದ್ದ ಬಸ್ ಗಳಲ್ಲಿನ ಬೆಂಕಿ ನಂದಿಸಲು ಅಗ್ನಿಶಾಮಕ ವಾಹನ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಿದರು. ಇದೇ ವೇಳೆ, ದೆಹಲಿಯ ಸುಖದೇವ್ ವಿಹಾರ್ ಮತ್ತು ಆಶ್ರಮ ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ…