ಕೇವಲ ನಾಲ್ಕು ತಿಂಗಳೊಳಗೆ “ಭವ್ಯವಾದ” ರಾಮ ಮಂದಿರ ಅಯೋಧ್ಯೆಯಲ್ಲಿ ನಿರ್ಮಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಸೋಮವಾರ ಮಹತ್ವದ ಹೇಳಿಕೆ ನೀಡಿದ್ದಾರೆ.ಜಾರ್ಖಂಡ್‌ನ ಪಕೂರ್‌ನಲ್ಲಿ ನಡೆದ ಚುನಾವಣಾ ಪ್ರಚಾರದ ಬೃಹತ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, “ಸುಪ್ರೀಂ ಕೋರ್ಟ್ ತನ್ನ ತೀರ್ಪು ಪ್ರಕಟಿಸಿದ್ದು, ಇನ್ನು ನಾವು 4 ತಿಂಗಳಲ್ಲಿ ಅಯೋಧ್ಯೆಯಲ್ಲಿ ಮುಗಿಲೆತ್ತರದ ಶ್ರೀರಾಮಮಂದಿರವನ್ನು ನಿರ್ಮಾಣ ಮಾಡುತ್ತೇವೆ ಎಂದು ಹೇಳಿದರು.
ಅಯೋಧ್ಯೆ ತೀರ್ಪಿನ ಬಳಿಕ ರಾಮಮಂದಿರ ನಿರ್ಮಾಣ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಮಹತ್ವದ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಘ್ರವಾಗಿ ರಾಮಮಂದಿರ ನಿರ್ಮಿಸುವುದಾಗಿ ಭರವಸೆ ನೀಡಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ ಅವರು ಇಲ್ಲಿಯವರೆಗೂ ನಾಗರಿಕರ ಭಾವನೆಗಳನ್ನು ಗೌರವಿಸದ ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಮಂದಿರ ನಿರ್ಮಾಣ ವಿಳಂಬವಾಗಿತ್ತು ಎಂದು ದೂರಿದರು.