Thursday, January 23, 2025
ರಾಜಕೀಯ

ಕಂಡಲ್ಲಿ ಗುಂಡಿಕ್ಕುವ ಹೇಳಿಕೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ-ಕಹಳೆ ನ್ಯೂಸ್

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಈಗಾಗಲೇ ದೇಶ ಹೊತ್ತಿ ಉರಿಯುತ್ತಿದೆ. ಈ ಕಾಯ್ದೆಯನ್ನು ಜಾರಿಗೆ ತರಬಾರದು ಎಂದು ಸಾಕಷ್ಟು ಮಂದಿ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ರೈಲ್ವೆ ಇಲಾಖೆಯ ಆಸ್ತಿಗಳಿಗೂ ಹಾನಿಯಾಗಿದೆ. ಈ ಪ್ರತಿಭಟನೆಗಳ ಬೆನ್ನಲ್ಲೇ ಕೇಂದ್ರ ಸಚಿವ ಸುರೇಶ್ ಅಂಗಡಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿಭಟನೆಯಲ್ಲಿ ರೈಲ್ವೇ ಇಲಾಖೆಯ ಆಸ್ತಿ ಹಾನಿ ಮಾಡುವವರನ್ನು ಕಂಡಲ್ಲಿ ಗುಂಡಿಕ್ಕಬೇಕು ಎಂದು ಹೇಳಿಕೆ ನೀಡಿದ್ದರು. ಇದು ಸಾಕಷ್ಟು ಚರ್ಚೆಯಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಮತ್ತೆ ತಮ್ಮ ಹೇಳಿಕೆಯನ್ನು ಸುರೇಶ್ ಅಂಗಡಿ ಸಮರ್ಥಿಸಿಕೊಂಡಿದ್ದಾರೆ. ಪ್ರತಿಭಟನೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ನಾಶ ಮಾಡುವುದ‌ನ್ನು ನೋಡಿ ಸುಮ್ಮನೆ ಇರೋದಿಕ್ಕೆ ಆಗೋದಿಲ್ಲ ಎಂದಿದ್ದಾರೆ. ಇನ್ನು ವಿರೋಧ ಪಕ್ಷಗಳು ಈ ಕಾಯ್ದೆಯನ್ನು ವಿರೋಧ ಮಾಡುತ್ತಿವೆ. ಹಾಗಾಗಿ ಅಲ್ಪ ಸಂಖ್ಯಾತರನ್ನು ಬಳಸಿಕೊಂಡು ಈ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.