ಬೆಂಗಳೂರು : ಉಪಚುನಾವಣೆಯ ಫಲಿತಾಂಶದ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಮೇಲೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಡಿ.ಕೆ.ಶಿವಕುಮಾರ್, ಹೆಚ್.ಕೆ.ಪಾಟೀಲ್, ಕೆ.ಹೆಚ್. ಮುನಿಯಪ್ಪ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.
ಈ ನಡುವೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸಹ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಕಾಂಗ್ರೆಸ್ ನ ಮಾರ್ಗರೇಟ್ ಆಳ್ವಾ ಹಾಗೂ ದೇಶಪಾಂಡೆ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಇನ್ನು ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನವನ್ನು ಈ ಹಿಂದೆ ಆರ್. ವಿ. ದೇಶಪಾಂಡೆ ಸಮರ್ಥವಾಗಿ ನಿಭಾಯಿಸಿದ್ದರು. ಹೀಗಾಗಿ ಅನುಭವದ ಆಧಾರದ ಮೇಲೆ ಆರ್.ವಿ.ದೇಶಪಾಂಡೆಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಸಿಗಬಹುದು ಎಂದು ಹೇಳಲಾಗುತ್ತಿದೆ.