ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಯ ಕಾವು ಏರುತ್ತಿದ್ದರೆ ಮತ್ತೊಂದೆಡೆ ದೆಹಲಿಯಲ್ಲಿ ಮೈ ಕೊರೆಯುವ ಚಳಿಗೆ ಜನ ತತ್ತರಿಸತೊಡಗಿದ್ದಾರೆ.
ದೆಹಲಿ, ಉತ್ತರಪ್ರದೇಶ, ಬಿಹಾರ, ಜಮ್ಮು-ಕಾಶ್ಮೀರ, ರಾಜಸ್ಥಾನ, ಪಂಜಾಬ್, ಹರ್ಯಾಣ ಹಾಗೂ ಮಧ್ಯಪ್ರದೇಶದಲ್ಲಿ ಗುರುವಾರ ದಾಖಲೆ ಪ್ರಮಾಣದ ಚಳಿ ದಾಖಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲೀಗ ದಟ್ಟ ಮಂಜು, ಮೈಕೊರೆಯುವ ಕನಿಷ್ಠ ತಾಪಮಾನ 6.6 ಡಿಗ್ರಿ ಸೆಲ್ಸಿಯಸ್ . ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್. ಏತನ್ಮಧ್ಯೆ ದೆಹಲಿಯಲ್ಲಿ ಕನಿಷ್ಠ ತಾಪಮಾನ ಇಂದು ದಾಖಲೆ ಪ್ರಮಾಣಕ್ಕೆ ಇಳಿಕೆ ಕಂಡಿದೆ.
ಗುರುವಾರ ದೆಹಲಿಯಲ್ಲಿ ದಟ್ಟ ಮಂಜು ಕವಿದ ವಾತಾವರಣ ಕಂಡು ಬಂದಿದೆ. ಮೈ ಕೊರೆಯುವ ಚಳಿಯಿಂದಾಗಿ ಜನ ಬೆಂಕಿಗೆ ಮೈಯೊಡ್ಡಿ ಕುಳಿತಿರುವ ದೃಶ್ಯ ಸಾಮಾನ್ಯವಾಗಿದೆ.