Wednesday, January 22, 2025
ಸಿನಿಮಾ

ಐದು ಭಾಷೆಗಳಲ್ಲಿ ಅವನೇ ಶ್ರೀಮನ್ನಾರಾಯಣ ತೆರೆಗೆ-ಕಹಳೆ ನ್ಯೂಸ್

ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಸಿನಿಮಾ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಡಿಸೆಂಬರ್ 27 ರಂದು ಕನ್ನಡದಲ್ಲಿ ಸಿನಿಮಾ ಬಿಡುಗಡೆಯಾದರೆ, ಅದಾದ ಬಳಿಕ ನಾಲ್ಕು ಭಾಷೆಗಳಲ್ಲಿ ಬೇರೆ ಬೇರೆ ದಿನಗಳಂದು ಬಿಡುಗಡೆಯಾಗುತ್ತಿದೆ.

ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ಅವನೇ ಶ್ರೀಮನ್ನಾರಾಯಣ ಡಿಸೆಂಬರ್ 27 ರಂದು ಬಿಡುಗಡೆಯಾಗುತ್ತಿರುವುದಾಗಿ ಚಿತ್ರತಂಡ ಘೋಷಿಸಿರುವುದು ಗೊತ್ತೇ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತೆಲುಗಿನಲ್ಲಿ ಜನವರಿ 1 ರಂದು, ತಮಿಳು ಮತ್ತು ಮಲಯಾಳಂನಲ್ಲಿ ಜನವರಿ 3 ರಂದು ಹಾಗೂ ಹಿಂದಿಯಲ್ಲಿ ಜನವರಿ 17 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಈಗಾಗಲೇ ಸಿನಿಮಾ ಬಗ್ಗೆ ಭರ್ಜರಿ ಪ್ರಚಾರ ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು