Wednesday, January 22, 2025
ಸುದ್ದಿ

ಮಂಗಳೂರು: ಡಿಸೆಂಬರ್ 20ರ ಶುಕ್ರವಾರ ನಗರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ–ಕಹಳೆ ನ್ಯೂಸ್

ಮಂಗಳೂರು ನಗರದಲ್ಲಿ ಗುರುವಾರದಂದು ನಡೆದ ಹಿಂಸಾಚಾರದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರದಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶದೆಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಮಂಗಳೂರಿನಲ್ಲಿ ಈ ಕಾಯ್ದೆಗೆ ಕೆಲವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಈ ನಡುವೆ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಆದರೆ, ಇದನ್ನು ಉಲ್ಲಂಘಿಸಿ ಕೆಲವರು ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಾಠಿ ಬೀಸಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿತ್ತು. ಇದರಿಂದ ಮಂಗಳೂರಿನಲ್ಲಿ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಎಚ್ಚರಿಕಾ ಕ್ರಮವಾಗಿ ಶುಕ್ರವಾರದಂದು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು