Thursday, January 23, 2025
ಸುದ್ದಿ

ಮಂಗಳೂರಿನಲ್ಲಿ ಕೇರಳ ಪತ್ರಕರ್ತರೆಂದು ಬಂದ 50 ಮಂದಿ ಪೊಲೀಸರ ವಶಕ್ಕೆ-ಕಹಳೆ ನ್ಯೂಸ್

ಮಂಗಳೂರು, ಡಿಸೆಂಬರ್ 20: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ಮಂಗಳೂರಿನಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ನಿಯಂತ್ರಣಕ್ಕೆ ಗೋಲಿಬಾರ್ ನಡೆದಿದ್ದು, ಇಬ್ಬರು ಪ್ರತಿಭಟನಾಕಾರರು ಸಾವನ್ನಪ್ಪಿದ್ದರು. ಈ ಘಟನೆ ಬೆನ್ನಲ್ಲೆ ಇಂದು ಐವತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರತಿಭಟನೆ ಹತ್ತಿಕ್ಕಲು ದ.ಕನ್ನಡದಲ್ಲಿ 48 ಗಂಟೆ ಇಂಟರ್ನೆಟ್‌ ಬಂದ್‌

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿಭಟನೆಯಲ್ಲಿ ಸಾವನ್ನಪ್ಪಿದ ಇಬ್ಬರ ಮೃತದೇಹವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಆಸ್ಪತ್ರೆ ಸುತ್ತ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಗೋಲಿಬಾರ್: ಸರ್ಕಾರಕ್ಕೆ ಕುಮಾರಸ್ವಾಮಿ ಪಂಚ ಪ್ರಶ್ನೆಗಳು

ಈ ನಡುವೆ ಇಂದು ಬೆಳಿಗ್ಗೆ ಪತ್ರಕರ್ತರು ಎಂದು ಹೇಳಿಕೊಂಡು ಬಂದ ಐವತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರೆಲ್ಲರೂ ಕೇರಳ ಮೂಲದವರಾಗಿದ್ದು, ಇಂದು ಬೆಳಿಗ್ಗೆ ಕೇರಳ ರೈಲಿನಲ್ಲಿ ಬಂದಿದ್ದರು ಎಂದು ತಿಳಿದುಬಂದಿದೆ. ಇವರು ವೆನ್ಲಾಕ್ ಆಸ್ಪತ್ರೆ ಪ್ರವೇಶಿಸುವ ವೇಳೆ ಪೊಲೀಸರು ಬಂಧಿಸಿದ್ದಾರೆ. ಪತ್ರಕರ್ತರು ಎನ್ನುವುದಕ್ಕೆ ಸೂಕ್ತ ದಾಖಲೆಗಳು ಸಿಗದ ಕಾರಣ ತಕ್ಷಣವೇ ಬಂಧಿಸಲಾಗಿದೆ.

ಇವರೆಲ್ಲರೂ ನಿನ್ನೆ ನಡೆದ ಪ್ರತಿಭಟನೆಯ ವರದಿಗೆ ಬಂದಿರುವ ಪತ್ರಕರ್ತರು ಎಂದು ಹೇಳಿಕೊಂಡಿದ್ದಾರೆ.