Thursday, January 23, 2025
ಸುದ್ದಿ

ಗುಜರಾತ್ ನಲ್ಲಿ ಖಾಕಿ ಮೇಲೆ ಕಲ್ಲು ತೂರಿದವರ ಬಂಧನ-ಕಹಳೆ ನ್ಯೂಸ್

ಅಹ್ಮದಾಬಾದ್, ಡಿಸೆಂಬರ್.20: ಗುಜರಾತ್ ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಡಿಸೆಂಬರ್.19ರಂದು ಅಹ್ಮದಾಬಾದ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಉದ್ರಿಕ್ತರ ಗುಂಪು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿತು. ನೋಡನೋಡುತ್ತಿದ್ದಂತೆ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ದೇಶದಲ್ಲಿ ಕಡಿಮೆಯಾಗಿಲ್ಲ ಪೌರತ್ವ ಕಾಯ್ದೆ ವಿರೋಧಿ ಕಿಚ್ಚು

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು, ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ ನಡೆಸಿದ್ದರು. ಇದುವರೆಗೂ ಅಹ್ಮದಾಬಾದ್ ನಲ್ಲಿ ಶಾಂತಿ ಕದಡಲು ಪ್ರಯತ್ನಿಸಿದರು ಎಂಬ ಆರೋಪದ ಮೇಲೆ 49 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಲೀಸರ ಕೈಗೆ ಸಿಕ್ಕಿಬಿದ್ದ ಕಾಂಗ್ರೆಸ್ ಕಾರ್ಪೊರೇಟರ್

ಕೇಂದ್ರ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಕೇವಲ ಸಂಘಟನೆಗಳು, ವಿದ್ಯಾರ್ಥಿಗಳಷ್ಟೇ ಇರಲಿಲ್ಲ. ರಾಜಕೀಯ ಪಕ್ಷದ ನಾಯಕರೂ ಕೂಡಾ ಇದ್ದರು. ಪೊಲೀಸರ ಮೇಲೆ ಕಲ್ಲುತೂರಾಟಕ್ಕೆ ಪ್ರಚೋದನೆ ನೀಡಿದರು ಎಂಬ ಆರೋಪದ ಮೇಲೆ ಕಾಂಗ್ರೆಸ್ ಕಾರ್ಪೊರೇಟರ್ ನ್ನು ಕೂಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈವರೆಗೂ ಒಟ್ಟು 49 ಜನರನ್ನು ಬಂಧಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಿಸುವ ಪೊಲೀಸರುತೀವ್ರ ಮುನ್ನೆಚ್ಚರಿಕೆ ವಹಿಸಿದ್ದಾರೆ.