Thursday, January 23, 2025
ಸುದ್ದಿ

ಉಡುಪಿ: ಉಸಿರಾಟದ ತೊಂದರೆ, ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್

ಉಡುಪಿ : ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಂದು ಮುಂಜಾನೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶ್ರೀಗಳು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದೆ ಶ್ರೀಗಳು ಉತ್ತರ ಭಾರತ, ತಿರುಪತಿ ಹಾಗೂ ಚೆನ್ನೈ ಪ್ರವಾಸದಲ್ಲಿದ್ದರು. ಗುರುವಾರ ರಾತ್ರಿ ಶೀತದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮುಂಜಾನೆ ಶ್ರೀಗಳಿಗೆ ತೀವ್ರವಾಗಿ ಉಸಿರಾಟದ ತೊಂದರೆ ಉಂಟಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಪೇಜಾವರ ಶ್ರೀಗಳ ಆರೋಗ್ಯ ಸುಧಾರಣೆಯಾಗಿದೆ ಎಂದು ವರದಿಯಾಗಿದೆ.