Monday, January 20, 2025
ರಾಜಕೀಯ

ಮಂಗಳೂರಿನಲ್ಲಿ ಇಬ್ಬರ ಸಾವಿಗೆ ಯು ಟಿ ಖಾದರ್ ಅವರೇ ನೇರ ಕಾರಣ ; ಸಂಸದ ಪ್ರತಾಪ ಸಿಂಹ – ಕಹಳೆ ನ್ಯೂಸ್

ಮೈಸೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರು ನಾಗರಿಕರ ಆತ್ಮಕ್ಕೆ ಶಾಂತಿಕೋರುತ್ತೇನೆ, ಇದಕ್ಕೆ ಮಾಜಿ ಸಚಿವ ಯು ಟಿ ಖಾದರ್ ಅವರ ಹೇಳಿಕೆಯೇ ನೇರ ಕಾರಣ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ರಾಜ್ಯಾದ್ಯಂತ ಗಲಭೆಯ ವಾತಾವರಣ ಸೃಷ್ಟಿಯಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಜ್ಯದಲ್ಲಿ ಸೆಕ್ಷನ್ 144 ಜಾರಿ ಮಾಡಿದ್ದರೂ ಕೂಡ ಅದನ್ನು ಉಲ್ಲಂಘಿಸಿ ಗಲಭೆ ಎಬ್ಬಿಸಲು ವ್ಯವಸ್ಥಿತ ಸಂಚು ನಡೆಸಲಾಗಿದೆ. ಮಂಗಳೂರು, ಬೆಂಗಳೂರು ಸೇರಿದಂತೆ ಮೈಸೂರಿನ ಟೌನ್ ಹಾಲ್ ಬಳಿ ಕೂಡ ಪ್ರತಿಭಟನೆ ನಡೆಸಲು ನೋಡುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ರಾಜ್ಯದಲ್ಲಿನ ಪರಿಸ್ಥಿತಿಗೆ ಕಾಂಗ್ರೆಸ್ ನಾಯಕರೇ ಕಾರಣರಾಗಿದ್ದಾರೆ. ಗಲಭೆಯ ವಾತಾವರಣ ಸೃಷ್ಟಿಸಲು ಕಾಂಗ್ರೆಸ್ ನಾಯಕರು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು