ಬೂದಿಮುಚ್ಚಿದ ಕೆಂಡದಂತಾದ ಕಡಲನಗರಿ ; ಡಿ.21ರಂದು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್
ಮಂಗಳೂರು, ಡಿ 20 : ಹಿಂಸಾಚಾರದ ಪ್ರತಿಭಟನೆಯ ಬಳಿಕ ಬೂದಿಮುಚ್ಚಿದ ಕೆಂಡದಂತಾದ ಕಡಲನಗರಿಯಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು ಈ ಹಿನ್ನೆಲೆಯಲ್ಲಿ ಡಿ.21ರ ಶನಿವಾರದಂದು ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಮದ್ಯದಂಗಡಿ, ವೈನ್ ಶಾಪ್, ಬಾರ್, ರೆಸ್ಟೋರೆಂಟ್ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.