Tuesday, January 21, 2025
ಸುದ್ದಿ

ಪೇಜಾವರ ಶ್ರೀಗಳ ಆರೋಗ್ಯ ಸ್ಥಿರ, ಗಂಭೀರ-ಕಹಳೆ ನ್ಯೂಸ್

ಉಡುಪಿ : ಕಳೆದ ಎರಡು ದಿನಗಳ ಹಿಂದೆ ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯಾದ ಕಾರಣದಿಂದಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಪೇಜಾವರ ಶ್ರೀಗಳು ದಾಖಲಾಗಿದ್ದರು. ಇಂತಹ ಪೇಜಾವರ ಶ್ರೀಗಳನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರಗೊಂಡಿರುವುದಾಗಿ ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅನಾರೋಗ್ಯದಿಂದಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಅಷ್ಠಮಠಗಳಲ್ಲಿ ಒಂದಾದಂತ ಪೇಜಾವರ ಮಠದ ವಿಶ್ವೇಶ್ವರ ಭಾರತೀ ಶ್ರೀಗಳು ದಾಖಲಾಗಿದ್ದರು. ಇಂತಹ ಶ್ರೀಗಳನ್ನು ಪರೀಕ್ಷೆಗೆ ಒಳಪಡಿಸಿದ್ದ ವೈದ್ಯರು ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿರುವುದಾಗಿ ತಿಳಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಳಿಕ ಶ್ರೀಗಳನ್ನು ತೀವ್ರ ನಿಗಾಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಶ್ರೀಗಳ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕರು ವಿಚಾರಿಸಿದ್ದರು. ಆದ್ರೇ ಇಂತಹ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರಗೊಂಡಿರುವುದಾಗಿ ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ. ಅಲ್ಲದೇ ಐಸಿಯುನಲ್ಲಿಯೇ ಶ್ರೀಗಳ ಚಿಕಿತ್ಸೆ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.