Monday, January 20, 2025
ಸುದ್ದಿ

ಪೇಜಾವರ ಶ್ರೀಗಳ ಆರೋಗ್ಯ ಸ್ಥಿರ- ಚಿಕಿತ್ಸೆಗೆ ಸ್ಪಂದನೆ-ಕಹಳೆ ನ್ಯೂಸ್

ಮಣಿಪಾಲ: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುಬ ಉಡುಪಿ ಪೇಜಾವರ ಮಠದ ಹಿರಿಯ ಯತಿ ವಿಶ್ವೇಶ ತೀರ್ಥರ ಆರೋಗ್ಯ ಸ್ಥಿತಿ ಇಂದು ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಡಾ. ಸುಧಾ ವಿದ್ಯಾಸಾಗರ್ ನೇತೃತ್ವದ ವೈದ್ಯರ ತಂಡ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣುತ್ತಿದೆ. ಎದೆಯಲ್ಲಿ ಕಟ್ಟಿದ್ದ ಕಫ ನಿಧಾನವಾಗಿ ಕರಗುತ್ತಿದೆ. ಶ್ರೀಗಳೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆದರೂ ಇಳಿ ವಯಸ್ಸುನ ಕಾರಣ ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪೇಜಾವರ ಶ್ರೀಗಳ ಆಪ್ತ ಕಾರ್ಯದರ್ಶಿ ವಿಷ್ಣುಮೂರ್ತಿ ಆಚಾರ್ಯ ಹೇಳಿಕೆ ನೀಡಿದ್ದಾರೆ, ಭಕ್ತರು ಆತಂಕ ಪಡಬೇಕಿಲ್ಲ. ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು