Monday, November 25, 2024
ಸುದ್ದಿ

ಬಿಗ್ ನ್ಯೂಸ್ : ಕೇಂದ್ರ ಸರ್ಕಾರದ ಮುಂದಿನ ಗುರಿ `NPR-ಕಹಳೆ ನ್ಯೂಸ್

ನವದೆಹಲಿ : ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇದೀಗ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್) ಜಾರಿಗೊಳಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಮಂಗಳವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಎನ್ ಪಿಆರ್ ಬಗ್ಗೆ ಗಹನ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಸಂಪುಟದಲ್ಲಿ ಎನ್ ಪಿಆರ್ ಗೆ ಒಪ್ಪಿಗೆ ದೊರೆತರೆ 2020 ಏಪ್ರಿಲ್ 1 ರಿಂದ ಸೆಪ್ಟೆಂಬರ್ 20ರ ವರೆಗೆ ಕೈಗೊಳ್ಳುವ ನಿರೀಕ್ಷೆ ಇದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದೇಶದ ಪ್ರತಿ ಮನೆಗೂ ಗಣತಿದಾರರು ಬಂದು ಜನಸಂಖ್ಯೆ ನೋಂದಣಿ ಮಾಡಲಿದ್ದಾರೆ. ಈ ಕಾರ್ಯಕ್ಕೆ ಬಯೋಮೆಟ್ರಿಕ್ ಸಾಧನ ಬಳಸಿ ದೇಶದ ನಿವಾಸಿಗಳ ಗುರುತಿನ ದತ್ತಾಂಶ ಸಂಗ್ರಹಿಸಲಾಗುತ್ತದೆ. ದೇಶದ ಯಾವುದೇ ಪ್ರದೇಶದಲ್ಲಿ 6 ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಅವಧಿ ವಾಸವಾಗಿರುವವರು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಬೇಕಾಗುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು