ವಿಶ್ವಮಟ್ಟದಲ್ಲಿ ಸುದ್ದಿಯಾಗಿದ್ದ ಭಾರತದಲ್ಲಿನ ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಲೆ ಇಳಿಕೆಯಾಗುವ ಮೊದಲೇ ಅಡುಗೆ ಎಣ್ಣೆ ದರ ಏರುವ ಆತಂಕ ಸೃಷ್ಟಿಯಾಗಿದೆ.
ಕಳೆದ ಎರಡು ತಿಂಗಳ ಅವಧಿಯಲ್ಲಿ ಪಾಮ್ ಆಯಿಲ್ ಬೆಲೆ ಸುಮಾರು 20 ರೂ. ಏರಿಕೆಯಾಗಿದೆ. ಇದು ಸುಮಾರು 35% ಏರಿಕೆಯಾದಂತೆ.
ಮಲೇಷ್ಯಾ ಹಾಗೂ ಇಂಡೋನೇಷ್ಯಾದಲ್ಲಿ ಸುಂಕ ದರ ಹೆಚ್ಚಾಗಿರುವುದು ಇದಕ್ಕೆ ಕಾರಣವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಲೀಲ್ ಜೈನ್, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಡುಗೆ ತೈಲ ಬೆಲೆ ಏರಿಕೆಯಾಗಿರುವುದರಿಂದ ದೇಶದಲ್ಲಿಯೂ ಏರಿಕೆಯಾಗಿದೆ. ಇದನ್ನು ಕಡಿಮೆ ಮಾಡಲು ಆಮದು ಮಾಡಿಕೊಳ್ಳುವುದನ್ನು ಬಿಟ್ಟು, ದೇಶದ ರೈತರಿಗೆ ಸೂಕ್ತ ಸಹಾಯಧನ ಘೋಷಿಸಿ ದೇಶದಲ್ಲಿ ಎಣ್ಣೆ ಬೀಜಗಳನ್ನು ಬೆಳೆಯುವಂತೆ ಮಾಡಬಹುದು ಎನ್ನುವ ಮಾತುಗಳು ಕೇಳಿಬಂದಿದೆ.