Monday, November 25, 2024
ಸುದ್ದಿ

ಮಂಗಳೂರಿಗೆ ಎಚ್. ಡಿ. ಕುಮಾರಸ್ವಾಮಿ ಭೇಟಿ, 5 ಲಕ್ಷ ಪರಿಹಾರ ವಿತರಣೆ-ಕಹಳೆ ನ್ಯೂಸ್

ಮಂಗಳೂರು, ಡಿಸೆಂಬರ್ 22 : ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಮಂಗಳೂರಿಗೆ ಭೇಟಿ ನೀಡಿದರು. ಗೋಲಿಬಾರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ವಿತರಣೆ ಮಾಡಿದರು.

ಭಾನುವಾರ ಬೆಳಗ್ಗೆ ಮಂಗಳೂರು ನಗರದಲ್ಲಿ ಕರ್ಫ್ಯೂ ಸಡಿಲಗೊಳಿಸಲಾಗಿದೆ. ಹಗಲು ಹೊತ್ತು ಕರ್ಫ್ಯೂ ಇರುವುದಿಲ್ಲ. ರಾತ್ರಿ ಕರ್ಫ್ಯೂ ಮುಂದುವರೆಯಲಿದೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮುಂದುವರೆಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಗೋಲಿಬಾರ್‌ ನಡೆದಿದ್ದು ಏಕೆ? ಕಾರಣ ನೀಡಿದ ಯಡಿಯೂರಪ್ಪ

ಜಾಹೀರಾತು
ಜಾಹೀರಾತು
ಜಾಹೀರಾತು

ಎಚ್. ಡಿ. ಕುಮಾರಸ್ವಾಮಿ ಭಾನುವಾರ ಮಂಗಳೂರಿಗೆ ಭೇಟಿ ನೀಡಿದರು. ಗೋಲಿಬಾರಿನಲ್ಲಿ ಮೃತರಾದ ಇಬ್ಬರು ಯುವಕರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಜೆಡಿಎಸ್ ಪಕ್ಷದ ವತಿಯಿಂದ 5 ಲಕ್ಷ ಪರಿಹಾರ ವಿತರಣೆ ಮಾಡಿದರು.

ಮಂಗಳೂರಲ್ಲಿ ಗೋಲಿಬಾರ್; ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಏನಂತಾರೆ?

ಮಾಧ್ಯಮಗಳ ಜೊತೆ ಮಾತನಾಡಿದ ಎಚ್. ಡಿ. ಕುಮಾರಸ್ವಾಮಿ “ಈ ಗೋಲಿಬಾರ್ ಪ್ರಕರಣದ ಬಗ್ಗೆ ಪಾರದರ್ಶಕವಾಗಿ ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ” ಎಂದು ಹೇಳಿದರು.

ಮಂಗಳೂರು ಗೋಲಿಬಾರ್: ಸರ್ಕಾರಕ್ಕೆ ಕುಮಾರಸ್ವಾಮಿ ಪಂಚ ಪ್ರಶ್ನೆಗಳು

ಮಂಗಳೂರು ನಗರದ ವ್ಯಾಪ್ತಿಯಲ್ಲಿ ಕರ್ಫ್ಯೂ ಸಡಿಲಗೊಳಿಸಲಾಗಿದೆ. ಆದ್ದರಿಂದ, ಅಂಗಡಿಗಳು ಬಾಗಿಲು ತೆರೆದಿವೆ. ಜನರು ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ. ನಗರ ಸಾರಿಗೆ ಬಸ್‌ಗಳು ಸಂಚಾರ ನಡೆಸುತ್ತಿವೆ.

ಪೆಟ್ರೋಲ್ ಬಂಕ್‌ಗಳ ಮುಂದೆ ಜನರು ಇಂಧನ ತುಂಬಿಸಿಕೊಳ್ಳಲು ಸಾಲುಗಟ್ಟಿ ನಿಂತಿದ್ದಾರೆ. ಭಾನುವಾರ ರಾತ್ರಿಯಿಂದ ಸೋಮವಾರ ಮುಂಜಾನೆ ತನಕ ಕರ್ಫ್ಯೂ ಇರುತ್ತದೆ. ಸೋಮವಾರ ಕರ್ಫ್ಯೂ ತೆರವುಗೊಳಿಸಲಿದ್ದು, 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಮುಂದುವರೆಯಲಿದೆ.