Sunday, November 24, 2024
ರಾಜಕೀಯ

ಹಿರಿಯ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಮತ್ತೆ ಶಾಕ್-ಕಹಳೆ ನ್ಯೂಸ್

ವಿಧಾನಸಭೆ ಉಪ ಚುನಾವಣೆ ಸೋಲಿನ ನಂತರ ರಾಜೀನಾಮೆ ನೀಡಿ ರಾಜಕೀಯ ತಂತ್ರಗಾರಿಕೆ ರೂಪಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಹಿರಿಯ ನಾಯಕರಿಗೆ ಶಾಕ್ ನೀಡಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆ ನೀಡಿದ ನಂತರ ಹಿರಿಯ ನಾಯಕರೆಲ್ಲರೂ ಆಕ್ಟಿವ್ ಆಗಿದ್ದರು. ಅವರ ರಾಜೀನಾಮೆ ಅಂಗೀಕರಿಸಿ ಮೂಲ ಕಾಂಗ್ರೆಸ್ಸಿಗರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ ಪ್ರಯತ್ನ ನಡೆಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ರಾಜ್ಯ ಕಾಂಗ್ರೆಸ್ ನಿಂದ ಸಿದ್ದರಾಮಯ್ಯ ದೂರವಾದರೆ ಪಕ್ಷಕ್ಕೆ ಬಾರಿ ಹಿನ್ನಡೆಯಾಗಲಿದೆ ಎಂಬುದನ್ನು ಮನಗಂಡ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಡ ಹೇರಿದೆ. ಇದನ್ನು ಮೊದಲೇ ಗ್ರಹಿಸಿದ್ದ ಸಿದ್ಧರಾಮಯ್ಯ ರಾಜೀನಾಮೆ ವಾಪಸ್ ಪಡೆಯುವುದಾಗಿ ತಿಳಿಸಿದ್ದಾರೆನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಿ ಅವರ ಸ್ಥಾನಕ್ಕೆ ಬೇರೆಯವರನ್ನು ನಿಯೋಜಿಸುವ ಸಾಧ್ಯತೆ ಇದೆ. ಆದರೆ, ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸದೇ ಅವರನ್ನೇ ಮುಂದುವರೆಸಲು ಪಕ್ಷದ ನಾಯಕರು ಚಿಂತನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತೆ ಆಕ್ಟಿವ್ ಆಗಿರುವುದು ಕಾಂಗ್ರೆಸ್ ನಾಯಕರಿಗೆ ನುಂಗಲಾರದ ತುತ್ತಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗುತ್ತದೆಯೇ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಶುರುವಾದಂತಿದೆ.

ಮಂಗಳೂರಿನಲ್ಲಿ ಹಿಂಸಾಚಾರ ನಡೆದ ಸಂದರ್ಭದಲ್ಲಿ ಸಿದ್ದರಾಮಯ್ಯ ತಮ್ಮ ಬೆಂಬಲಿಗರನ್ನು ಅಲ್ಲಿಗೆ ಕಳುಹಿಸಿದ್ದರು. ಅವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂಬ ಅಸಮಾಧಾನ ಹಿರಿಯ ನಾಯಕರಲ್ಲಿ ಇದೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಹಿಡಿತ ತಪ್ಪಿದರೆ ಮುಂದೆ ತಮ್ಮ ರಾಜಕೀಯ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅನೇಕ ಶಾಸಕರು, ನಾಯಕರು ಕೂಡ ಸಿದ್ದರಾಮಯ್ಯ ಅವರಿಗೆ ನಾಯಕತ್ವ ವಹಿಸಿಕೊಳ್ಳಬೇಕೆಂದು ದುಂಬಾಲು ಬಿದ್ದಿದ್ದು, ವರಿಷ್ಠರ ಮೇಲೆ ಒತ್ತಡ ಹೇರಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಮತ್ತೆ ಆಕ್ಟಿವ್ ಆಗಿರುವುದು ಹಿರಿಯ ನಾಯಕರಿಗೆ ನುಂಗಲಾರದ ತುತ್ತಾಗಿದೆ ಎಂದು ಹೇಳಲಾಗಿದೆ.