Monday, January 20, 2025
ಸುದ್ದಿ

ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕರ ಪ್ರಮಾಣವಚನ-ಕಹಳೆ ನ್ಯೂಸ್

ಬೆಂಗಳೂರು, ಡಿ.22:ಕರ್ನಾಟಕದಲ್ಲಿ ನಡೆದ ಕಳೆದ ಉಚುನಾವಣೆಯಲ್ಲಿ ಆಯ್ಕೆಯಾದ ನೂತನ ಶಾಸಕರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಶಾಸಕರಾದ ಕೆ.ಆರ್.ಪುರಂನ ಭೈರತಿ ಬಸವರಾಜ್, ಕೆಆರ್ ಪೇಟೆಯ ನಾರಾಯಣ ಗೌಡ, ಚಿಕ್ಕಬಳ್ಳಾಪುರದ ಡಾ.ಕೆ. ಸುಧಾಕರ್, ಹಿರೆಕೆರೂರು ಕ್ಷೇತ್ರದ ಬಿ.ಸಿ.ಪಾಟೀಲ್, ಕಾಗವಾಡ ಕ್ಷೇತ್ರದ ಶ್ರೀಮಂತ್ ಪಾಟೀಲ್ , ಅಥಣಿಯ ಮಹೇಶ್ ಕುಮಠಲ್ಲಿ, ಹೊಸಕೋಟೆಯ ಶರತ್ ಬಚ್ಚೇಗೌಡ, ಯಲ್ಲಾಪುರದ ಶಿವರಾಮ್ ಹೆಬ್ಬಾರ್, ಗೋಕಾಕ್ ಕ್ಷೇತ್ರದ ರಮೇಶ್ ಜಾರಕಿಹೊಳಿ, ರಾಣೆಬೆನ್ನೂರಿನ ಅರುಣ್ ಕುಮಾರ್, ವಿಜಯ ನಗರದ ಆನಂದ್ ಸಿಂಗ್, ಮಹಾಲಕ್ಷ್ಮೀ ಲೇ ಔಟ್ ನ ಗೋಪಾಲಯ್ಯ, ಹೊಸಕೋಟೆಯ ಶರತ್ ಬಚ್ಚೇಗೌಡ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಮಾಣ ವಚನ ಬೋಧಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು