Monday, January 20, 2025
ಸುದ್ದಿ

ಪೌರತ್ವ ತಿದ್ದುಪಡಿ ಕಾಯ್ದೆ ಬಡಜನರ ವಿರುದ್ಧವಾಗಿದೆ : ಪ್ರಿಯಾಂಕಾ ವಾಧ್ರಾ ಕಿಡಿ-ಕಹಳೆ ನ್ಯೂಸ್

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಬಡಜನರ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾಧ್ರಾ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ನವದೆಹಲಿಯ ಇಂಡಿಯಾ ಗೇಟ್‌ನಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾಗಿಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿಭಟನೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ 2019 ಮತ್ತು ಎನ್‌ಆರ್‌ಸಿ ಕುರಿತು ಮಾತನಾಡಿದ ಅವರು, ಪೌರತ್ವ ಕಾಯ್ದೆ ತಿದ್ದುಪಡಿ ಮತ್ತು ಎನ್‌ಆರ್‌ಸಿ ಬಡವರ ವಿರುದ್ಧವಾಗಿವೆ ಎಂದು ಕಿಡಿಕಾರಿದರು. ಪ್ರತಿಭಟನಾಕಾರರೊಂದಿಗೆ ಐಕ್ಯಮತ ತೋರಿಸಲು ಬಂದಿದ್ದೇನೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಶಾಂತಿಯುತವಾಗಿ ಹೋರಾಟ ನಡೆಸಬೇಕು ಎಂದು ಪ್ರಿಯಾಂಕ ಗಾಂಧಿ ಕರೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು