Recent Posts

Monday, January 20, 2025
ಸುದ್ದಿ

ಪೌರತ್ವ ಕಾಯ್ದೆ ವಿರೋಧಿಸಿ ಕೇರಳ ದಂಪತಿಯ `ಪ್ರೀ-ವೆಡ್ಡಿಂಗ್’ ಫೋಟೋ ವೈರಲ್-ಕಹಳೆ ನ್ಯೂಸ್

ತಿರುವನಂತಪುರಂ : ದೇಶಾದ್ಯಂತ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿದ್ದು. ಈ ನಡುವೆ ಕೇರಳದ ದಂಪತಿ ಪೌರತ್ವ ಕಾಯ್ದೆ ವಿರೋಧಿಸಿ ಮಾಡಿಸಿರುವ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಸಖತ್ ವೈರಲ್ ಆಗಿದೆ.

ಕೇರಳದ ಅರುಣ್ ಗೋಪಿ ಹಾಗೂ ಆಶಾ ಶೇಖರ್ ದಂಪತಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ್ದು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೊನ್ನುಡಿ ಬೆಟ್ಟದ ಮುಂಭಾಗ `NO CAA’ , `NO NRC’ ಎಂಬ ಬೋರ್ಡ್ ಹಿಡಿದು ಕೇರಳ ದಂಪತಿ ಫೋಟೋ ಶೂಟ್ ಮಾಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡಿ. 18 ರಂದು ಫಸ್ಟ್ ಲುಕ್ ಫೋಟೋಗ್ರಾಫಿ ಹೆಸರಿನ ಫೇಸ್ ಬುಕ್ ಖಾತೆಯಿಂದ ಅರುಣ್ ಗೋಪಿ ಹಾಗೂ ಆಶಾ ಶೇಖರ್ ಅವರ ಪ್ರೀ-ವೆಡ್ಡಿಂಗ್ ಫೋಟೋ ಶೂಟ್ ಫೋಟೋಗಳನ್ನು ಅಪ್ಲೋಡ್ ಮಾಡಲಾಗಿತ್ತು. ನಂತರ ಈ ಫೋಟೋಗಳನ್ನು ಇತರೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಶೇರ್ ಮಾಡಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು