Monday, January 20, 2025
ಸುದ್ದಿ

ಇಂಡಿಯಾ -ವಿಂಡೀಸ್ ನಿರ್ಣಾಯಕ ಪಂದ್ಯ : ಸರಣಿ ಗೆಲ್ಲುವ ವೀರರು ಯಾರು?-ಕಹಳೆ ನ್ಯೂಸ್

ಕಟಕ್: ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಅಂತಿಮ ಮತ್ತು ನಿರ್ಣಾಯಕ ಪಂದ್ಯ ಕಟಕ್ ನಲ್ಲಿ ನಡೆಯಲಿದ್ದು, ಯಾರು ಸರಣಿ ಗೆಲ್ಲಲಿದ್ದಾರೆ ಕಾದು ನೋಡಬೇಕು.

ಈಗಾಗಲೇ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು 1-1ರಲ್ಲಿ ಸಮಬಲ ಸಾಧಿಸಿದ್ದು, ಇಂದು ನಡೆಯುವ ಅಂತಿಮ ಪಂದ್ಯದಲ್ಲಿ ಗೆಲ್ಲುವ ತಂಡ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚೆನ್ನೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿಂಡೀಸ್ ವಿಜಯ ಪತಾಕೆ ಹಾರಿಸಿತ್ತು , ವಿಶಾಖಪಟ್ಟಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಭಾರತ ಅಬ್ಬರಿಸಿತ್ತು. ಇದೀಗ ಅಂತಿಮ ಪಂದ್ಯದಲ್ಲಿ ಭಾರಿ ಹಣಾಹಣಿ ನಡೆಯಲಿದ್ದು, ಯಾರು ಗೆಲ್ಲುವರು ಎಂಬ ಕುತೂಹಲ ಮೂಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು