Recent Posts

Monday, January 20, 2025
ಸುದ್ದಿ

ಬ್ರೇಕಿಂಗ್ : ಮಂಗಳೂರು ಗಲಭೆ ಪ್ರಕರಣ : ಮೃತರ ಕುಟುಂಬಕ್ಕೆ ಸಿಎಂ ಬಿಎಸ್ ವೈ ತಲಾ 10 ಲಕ್ಷ ಪರಿಹಾರ ಘೋಷಣೆ-ಕಹಳೆ ನ್ಯೂಸ್

ಬೆಂಗಳೂರು : ಈಗಾಗಲೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಮಂಗಳೂರಿನ ಪೌರತ್ವದ ವಿರುದ್ಧದ ಹೋರಾಟದಲ್ಲಿ ಗೋಲಿಬಾರ್ ನಿಂದಾಗಿ ಮೃತಪಟ್ಟ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ್ದರು. ಇದಾದ ಬಳಿಕ ಇದೀಗ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗಲಭೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಗಲಭೆಯಲ್ಲಿ ಮೃತಪಟ್ಟ ಮಂಗಳೂರಿನ ನಿವಾಸಿಗಳಾದ ನೌಶೀನ್ ಕುದ್ರೋಳಿ ಹಾಗೂ ಅಬ್ದುಲ್ ಜಲೀಲ್ ಎಂಬುವರ ಕುಟುಂಬಕ್ಕೆ ಸರ್ಕಾರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ಕುಟುಂಬಕ್ಕೆ ತಕ್ಷಣವೇ ಪರಿಹಾರದ ಹಣವನ್ನು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದು, ಗಲಭೆಯ ಬಗ್ಗೆ ತನಿಖೆ ನಡೆಸುವುದರ ಕುರಿತು ನಂತ್ರ ನಿರ್ಣಯ ತೆಗೆದುಕೊಳ್ಳಲಾಗುವುದು. ಮಂಗಳೂರಿನಲ್ಲಿ ಪರಿಸ್ಥಿತಿ ಶಾಂತವಾಗಿದೆ. ಸಿದ್ದರಾಮಯ್ಯ ಸೇರಿದಂತೆ ಯಾವ ನಾಯಕರು ಬೇಕಾದರೂ ಮಂಗಳೂರಿಗೆ ಹೋಗಲಿ ನಮ್ಮ ಅಭ್ಯಂತರವಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು