Monday, January 20, 2025
ಸುದ್ದಿ

ಆಸ್ಪತ್ರೆಗೆ ಭೇಟಿ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಕುಮಾರಸ್ವಾಮಿ-ಕಹಳೆ ನ್ಯೂಸ್

ಮಂಗಳೂರು, ಡಿ.22: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಸಂದರ್ಭ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಉಂಟಾದ ಘರ್ಷಣೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಕುಮಾರಸ್ವಾಮಿ ಗೋಲಿಬಾರ್‌ಗೆ ಬಲಿಯಾದ ಅಬ್ದುಲ್ ಜಲೀಲ್ ಮತ್ತು ನೌಶೀನ್ ಕುಟುಂಬಸ್ಥರನ್ನು ಭೇಟಿಯಾದ ಬಳಿಕ ಫಳ್ನೀರ್ ಸಮೀಪದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದರು. ಮಾಜಿ ಮೇಯರ್ ಅಶ್ರಫ್ ಹಾಗೂ ಗಂಭೀರ ಗಾಯಗಳೊಂದಿಗೆ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇತರ ಮೂವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಗಾಯಾಳುಗಳ ಹಾಗೂ ಕುಟುಂಬಸ್ಥರ ಅಳಲು ಆಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು