Tuesday, January 21, 2025
ರಾಜಕೀಯ

ಬಿಗ್ ಬ್ರೇಕಿಂಗ್ : ಮಂಗಳೂರಿನಲ್ಲಿ ಪೌರತ್ವದ ವಿರೋಧಿ ಪ್ರತಿಭಟನೆ ಪ್ರಕರಣ : ಯುಟಿ ಖಾದರ್ ವಿರುದ್ಧ ಎಫ್‌ಐಆರ್ ದಾಖಲು-ಕಹಳೆ ನ್ಯೂಸ್

ಮಂಗಳೂರು : ಪೌರತ್ವ ವಿರೋಧಿ ಕಿಚ್ಚು ಮಂಗಳೂರಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಹೆಚ್ಚಾಗಿತ್ತು. ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್, ಅಶ್ರುವಾಯು ಜೊತೆಗೆ ಗೋಲಿಬಾರ್ ಕೂಡ ನಡೆಸಿದ್ದರು. ಈ ವೇಳೆ ಇಬ್ಬರು ಬಲಿಯಾಗಿದ್ದರು. ಇಂತಹ ಪ್ರಕರಣಕ್ಕೆ ಮುಖ್ಯಕಾರಣ ಮಾಜಿ ಸಚಿವ ಯು ಟಿ ಖಾದರ್ ಭಾಷಣವೇ ಕಾರಣ ಎಂಬುದಾಗಿ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರನ್ನು ಆಧರಿ, ಇದೀಗ ಮಾಜಿ ಸಚಿವ ಯುಟಿ ಖಾದರ್ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ( ಸಿಎಎ) ವಿರೋಧಿಸಿ, ಕಳೆದ ಬುಧವಾರದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಭಾರಿ ಪ್ರತಿಭಟನೆ ನಡೆಸಲಾಗಿತ್ತು. ಮೊದಲ ಮೊದಲು ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಆನಂತ್ರ ತೀವ್ರ ಸ್ವರೂಪವನ್ನು ಪಡೆದುಕೊಂಡಿತ್ತು. ಹೀಗಾಗಿ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಲ್ಲದೇ, ಅಶ್ರುವಾಯು ಸಿಡಿಸಿ, ಗೋಲಿಬಾರ್ ಕೂಡ ನಡೆಸಿದ್ದರು. ಹೀಗಾಗಿ ಇಬ್ಬರು ಬಲಿಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂತಹ ಪರಿಸ್ಥಿತಿ ಉಂಟಾಗಲು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರಾಜ್ಯ ಹೊತ್ತಿ ಉರಿಯುವ ದಿನಗಳು ದೂರವಿಲ್ಲ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಎಂಬುದಾಗಿ ಮಾಜಿ ಸಚಿವ ಯುಚಿ ಖಾದರ್ ಮಾಡಿದ್ದ ಭಾಷಣೆವೇ ಇಂತಹ ಘಟನೆ ನಡೆಯಲು ಕಾರಣ ಎಂಬುದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂದೇಶ್ ಕುಮಾರ್ ಶೆಟ್ಟಿ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಈ ದೂರನ್ನು ಆಧರಿಸಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು