ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಮತದಾನ ಎಣಿಕೆ ಕಾರ್ಯ ನಡೆಯುತ್ತಿದ್ದು, ಈ ವರೆಗಿನ ವರದಿಗಳ ಅನ್ವಯ ಬಿಜೆಪಿ ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಇತ್ತೀಚಿನ ವರದಿಗಳಂತೆ ಜಾರ್ಖಂಡ್ ನ ಒಟ್ಟು 81 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 33 ಕ್ಷೇತ್ರಗಳಲ್ಲಿ, ಜಾರ್ಖಂಡ್ ಮುಕ್ತಿ ಮೋರ್ಚಾ ಮತ್ತು ಕಾಂಗ್ರೆಸ್ ಮೈತ್ರಿ ಕೂಟ 33 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.
ಎಜೆಎಸ್ ಯು ಪಕ್ಷ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಜೆವಿಎಂ 3 ಮತ್ತು ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಅಖಿಲ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ (ಎಜೆಎಸ್ಯು) ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.