Friday, November 29, 2024
ಸುದ್ದಿ

ಡಿಸೆಂಬರ್ 26 ರ ಸೂರ್ಯ ಗ್ರಹಣ ದಿನದಂದು ಶಾಲಾ – ಕಾಲೇಜುಗಳಿಗೆ ರಜೆ

ಇದೇ ಡಿಸೆಂಬರ್ 26 ರಂದು ಬೆಳಿಗ್ಗೆ ಸೂರ್ಯ ಗ್ರಹಣ ಇರುವುದರಿಂದ ರಜೆ ನೀಡಬೇಕೆಂಬ ಒತ್ತಾಯ ಕೇಳಿಬಂದಿದೆ. ಗುರುವಾರ ಬೆಳಿಗ್ಗೆ 8 ಗಂಟೆ 4 ನಿಮಿಷದಿಂದ 11 ಗಂಟೆ 3 ನಿಮಿಷದವರೆಗೆ ಖಂಡಗ್ರಾಸ ಸೂರ್ಯಗ್ರಹಣ ಇರುವುದರಿಂದ ಶಾಲಾ, ಕಾಲೇಜುಗಳಿಗೆ ರಜೆ ನೀಡಬೇಕೆಂಬ ಒತ್ತಡ ಪೋಷಕರಿಂದ ಕೇಳಿಬಂದಿದೆ.

ಗ್ರಹಣಕಾಲದಲ್ಲಿ ಮಕ್ಕಳು ಬೆಳಗಿನ ಉಪಹಾರ ಸೇವಿಸಿ ಶಾಲೆ-ಕಾಲೇಜುಗಳಿಗೆ ತೆರಳಲು ಸಮಸ್ಯೆಯಾಗುತ್ತದೆ. ಹಾಗಾಗಿ ರಜೆ ನೀಡಬೇಕೆಂಬ ಒತ್ತಾಯ ಪೋಷಕರಿಂದ ಕೇಳಿಬಂದಿದ್ದು ಶಾಲೆಗಳ ಆಡಳಿತ ಮಂಡಳಿಗಳು ಮತ್ತು ಶಿಕ್ಷಕರಿಗೆ ಈ ಕುರಿತು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಬಹುತೇಕ ಎಲ್ಲಾ ಶಾಲೆಗಳಲ್ಲಿ ಕಿರುಪರೀಕ್ಷೆಗಳು ನಡೆಯುತ್ತಿದ್ದು ರಜೆ ನೀಡಿದರೆ ಒಂದು ದಿನ ಕೊರತೆಯಾಗುತ್ತದೆ ಎಂಬ ಕಾರಣಕ್ಕೆ ರಜೆ ನೀಡಬೇಕೇ? ಬೇಡವೇ? ಎಂಬ ಗೊಂದಲದಲ್ಲಿ ಶಾಲಾ ಆಡಳಿತ ಮಂಡಳಿಗಳು ಇವೆ. ಅನೇಕ ಪೋಷಕರು ಅಂದು ರಜೆ ನೀಡಲು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಹುತೇಕ ಶಾಲಾ ಆಡಳಿತ ಮಂಡಳಿಗಳು ರಜೆ ನೀಡಲು ಚಿಂತನೆ ನಡೆಸಿವೆ. ಬೆಳಿಗ್ಗೆಯೇ ಗ್ರಹಣಕಾಲ ಇರುವುದರಿಂದ ರಜೆ ನೀಡಬೇಕೆಂಬ ಒತ್ತಡ ಕೇಳಿಬಂದಿದ್ದು ಸರ್ಕಾರ, ಖಾಸಗಿ ಶಿಕ್ಷಣ ಸಂಸ್ಥೆಗಳು ಯಾವ ನಿರ್ಧಾರ ಕೈಗೊಳ್ಳಲಿವೆ ಎನ್ನುವುದನ್ನು ಕಾದು ನೋಡಬೇಕಿದೆ.