ಜಾರ್ಖಂಡ್ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಒಮ್ಮೆ ಬಿಜೆಪಿ ಮತ್ತೊಮ್ಮೆ ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಸಾಧಿಸಿವೆ.
81 ಕ್ಷೇತ್ರ ಗಳಿರುವ ಜಾರ್ಖಂಡ್ ವಿಧಾನಸಭೆಯಲ್ಲಿ ಬಹುಮತಕ್ಕೆ ಮ್ಯಾಜಿಕ್ ನಂಬರ್ 41 ಆಗಿದೆ. ಬಿಜೆಪಿ 39 ಕಾಂಗ್ರೆಸ್ ಮೈತ್ರಿಕೂಟ 33, ಇತರರು 7, ಎಜೆಎಸ್ಯು 3 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.
ಮತ ಎಣಿಕೆ ಮುಂದುವರೆದಿದ್ದು, ಮಧ್ಯಾಹ್ನದೊಳಗೆ ಫಲಿತಾಂಶದ ಸಂಪೂರ್ಣ ಚಿತ್ರಣ ಗೊತ್ತಾಗಲಿದೆ. ಸಮೀಕ್ಷೆಗಳು ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ಹೇಳಿದ್ದರೂ, ಬಿಜೆಪಿ ಅಭ್ಯರ್ಥಿಗಳು 39 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.