Sunday, November 24, 2024
ಸುದ್ದಿ

ಜ.3ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ-ಕಹಳೆ ನ್ಯೂಸ್

ತುಮಕೂರು: ಜನವರಿ 3 ರಂದು ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಆದ್ದರಿಂದ ಪ್ರಧಾನಿ ಮೋದಿ ಕಾರ್ಯಕ್ರಮ ಮುಗಿಯುವವರೆಗೂ ಅಧಿಕಾರಿಗಳಿಗೆ ರಜೆ ಇರುವುದಿಲ್ಲ ಎಂದು , ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಪ್ರಧಾನಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿದರು. ದಿನ ವರ್ಷ ಜನವರಿ 3ರಂದು ತುಮಕೂರು ನಗರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಸಮಯ ಕಡಿಮೆ ಇದ್ದ ಹಿನ್ನೆಲೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕಿದೆ. ಎಲ್ಲಾಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಹೇಳಿದರು.ನಗರದ ಜ್ಯೂನಿಯರ್‌ ಕಾಲೇಜು ಮೈದಾನದಲ್ಲಿ ಜ.3ರಂದು ರೈತರ ಸಮಾವೇಶ ಆಯೋಜಿಸಲಾಗಿದ್ದು, ಕೃಷಿ ಸಮ್ಮಾನ್‌ ಯೋಜನೆಯ ಎರಡನೇ ಕಂತನ್ನು ನರೇಂದ್ರ ಮೋದಿ ಅವರು ದೇಶದಾದ್ಯಂತ ಆರಂಭಿಸಲು ತುಮಕೂರಿನಲ್ಲೇ ಚಾಲನೆ ನೀಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು