Tuesday, January 21, 2025
ರಾಜಕೀಯ

ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡಲೇಬೇಕು : ಸಚಿವ ಶ್ರೀರಾಮುಲು-ಕಹಳೆ ನ್ಯೂಸ್

ರಾಯಚೂರು : ಗೋಲಿಬಾರ್ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಯಾವುದೇ ಪರಿಹಾರ ನೀಡಲಾಗುವುದಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ ಸಚಿವ ಶ್ರೀರಾಮುಲು ಪರಿಹಾರ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ಮಂಗಳೂರು ಹಿಂಸಾಚಾರದಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡಲೇಬೇಕು. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ತನಿಖೆಯಿಂದ ಎಲ್ಲವೂ ಗೊತ್ತಾಗುತ್ತದೆ. ಆ ನಂತರ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಎಂ ಬಿ.ಎಸ್. ಯಡಿಯೂರಪ್ಪ ಮಂಗಳೂರು ಹಿಂಸಾಚಾರ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಒಂದು ರೂಪಾಯಿ ಕೂಡ ಪರಿಹಾರ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು