Sunday, January 19, 2025
ರಾಜಕೀಯ

Breaking News : ಸಿಎಂ ಬಿಎಸ್ ವೈ ಕಾರಿಗೆ ಕಪ್ಪು ಬಾವುಟ ಪ್ರದರ್ಶನ : ಕೇರಳದಲ್ಲಿ ಐವರ ಬಂಧನ – ಕಹಳೆ ನ್ಯೂಸ್

ಕಣ್ಣೂರು : ಕೇರಳದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಕಾರನ್ನು ಅಡ್ಡಗಟ್ಟಿ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿಪಿಐ(ಎಂ) ಹಾಗೂ ಕಾಂಗ್ರೆಸ್ ಪಕ್ಷದ ಐವರು ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಒಟ್ಟು 5 ಮಂದಿಯನ್ನು ಬಂಧಿಸಲಾಗಿದ್ದು, ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಐಪಿಸಿ ಸೆಕ್ಷನ್ 353 ಅಡಿ ಸಾರ್ವಜನಿಕ ಸೇವೆಯಲ್ಲಿರುವ ವ್ಯಕ್ತಿಗೆ ಕರ್ತವ್ಯಕ್ಕೆ ಅಡ್ಡಿಪಡಿಸುವ ಹಲ್ಲೆ ಅಥವಾ ಕ್ರಿಮಿನಲ್ ಕೃತ್ಯ ಮತ್ತು ಕಾನೂನು ಬಾಹಿರ ಚಟುವಟಿಕೆಗಳ ಆರೋಪದಲ್ಲಿ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಡಾಯಿಕಾವುಗೆ ಆಗಮಿಸುತ್ತಿದ್ದ ಬಿ.ಎಸ್.ವೈ ವಾಹನ ಮೇಲೆ  ದಾಳಿ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

 

ಮಂಗಳವಾರ ಕಣ್ಣೂರು ಜಿಲ್ಲೆಯ ತಾಲಿಪರಂಬದಲ್ಲಿನ ರಾಜರಾಜೇಶ್ವರಿ ಮತ್ತು ಮಾದಯಿಕಾವು ದೇವಸ್ಥಾನಗಳಿಗೆ ತೆರಳುತ್ತಿದ್ದ ಬಿಎಸ್ ವೈ ಕಾರಿಗೆ ಪಳಯಂಗಡಿ ಎಂಬಲ್ಲಿ ಸಿಪಿಐ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದ್ದರು.