Recent Posts

Monday, January 20, 2025
ಸುದ್ದಿ

Breaking news ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ದ್ವಿಚಕ್ರ ನಡುವೆ ಡಿಕ್ಕಿ ಮಹಿಳೆ ಮೃತ್ಯು-ಕಹಳೆ ನ್ಯೂಸ್

ಕಡಬ, ಡಿ.26. ಕೆ ಎಸ್ ಅರ್ ಟಿ ಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಕಡಬದ ಹಳೇ ಸ್ಟೇಷನ್ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

ಮೃತರನ್ನು ನೂಜಿಬಾಳ್ತಿಲ ಗ್ರಾಮದ ಪಳೆಯಮಜಲು ನಿವಾಸಿ ಜೂಲಿ ತೋಮಸ್ ಎಂದು ಗುರುತಿಸಲಾಗಿದೆ. ಮೃತರು ಕಡಬದಲ್ಲಿ ನಡೆಯುತ್ತಿದ್ದ ಸಂಯುಕ್ತ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗವಹಿಸಲೆಂದು ತನ್ನ ಪತ್ನಿ ಹಾಗೂ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಹಳೇಸ್ಟೇಷನ್ ಸಮೀಪ ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡು ವೆ ಈ ಅವಘಡ ಸಂಭವಿಸಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗಾಯಾಳುವನ್ನು ಕಡಬದ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು