Recent Posts

Monday, January 20, 2025
ಸುದ್ದಿ

Breaking News : ಇದೀಗ ಬಂದ ಹೆಲ್ತ್ ಬುಲೆಟಿನ್: ಗಂಭೀರ ಸ್ಥಿತಿಯಲ್ಲಿ ಪೇಜಾವರ ಶ್ರೀ – ಕಹಳೆ ನ್ಯೂಸ್

ಉಡುಪಿ, [ಡಿ.26]: ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಹೆಚ್ಚೇನೂ ಸುಧಾರಣೆಯಾಗಿಲ್ಲ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬಿಡುಗಡೆಯಾದ  ಹೆಲ್ತ್ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.

ಇಂದು [ಗುರುವಾರ] KMC  ಆಸ್ಪತ್ರೆಯಿಂದ  7ನೇ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು. ಶ್ರೀಗಳ ಆರೋಗ್ಯ ಗಂಭೀರ ಸ್ಥಿತಿಯಲ್ಲಿಯೇ ಇದೆ ಎಂದು ವೈದ್ಯರು ಹೆಲ್ತ್ ಬುಲೆಟಿನ್ ನಲ್ಲಿ ಉಲ್ಲೇಖವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪೇಜಾವರ ಶ್ರೀಗಳು ಇನ್ನೂ ಕೂಡ ಜೀವ ರಕ್ಷಕ ಸಾಧನಗಳ ಅಳವಡಿಕೆಯಲ್ಲಿ ಇದ್ದಾರೆ. ಪ್ರಜ್ಞಾ ಸ್ಥಿತಿಯಲ್ಲಿ ನಿನ್ನೆಯಿಂದ ಹೆಚ್ಚೇನೂ ಸುಧಾರಣೆ ಕಂಡುಬಂದಿಲ್ಲ. ಗಂಭೀರ ಸ್ಥಿತಿಯಲ್ಲೇ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಅಧೀಕ್ಷಕರು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ  ತಜ್ಞರ ನೆರವಿನ ಜತೆಗೆ ದೆಹಲಿಯ ಏಮ್ಸ್ ವೈದ್ಯ ತಜ್ಞರ ಸಲಹೆ-ಸೂಚನೆಗಳ ಮೇರೆಗೆ ಚಿಕಿತ್ಸೆ ಮುಂದುವರೆದಿದೆ. ಡಿಸೆಂಬರ್ 20ರಂದು ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮತ್ತೊಂದೆಡೆ ಶ್ರೀಗಳು ಬೇಗ ಗುಣಮುಖರಾಗಲೆಂದು ರಾಜ್ಯದ ವಿವಿಧೆಡೆ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ.