ಹೊಸ ವರ್ಷಾಚರಣೆ ನೆಪದಲ್ಲಿ ನಡೆಯುವ ಅನೈತಿಕ ಚಟುವಟಿಕೆ,ಅಶ್ಲೀಲ ಪಾರ್ಟಿ,ಸಾರ್ವಜನಿಕ ಶಾಂತಿ ಭಂಗಕ್ಕೆ ಬಜರಂಗದಳ ವಿರೋಧ-ಕಹಳೆ ನ್ಯೂಸ್
ಹೊಸ ವರ್ಷಾಚರಣೆ ನೆಪದಲ್ಲಿ ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳ-ರಸ್ತೆಗಳಲ್ಲಿ ಮೋಜು ಮಸ್ತಿ ಮಾಡಿ ಮಧ್ಯರಾತ್ರಿ ಹೊತ್ತಿನಲ್ಲಿ ಶಾಂತಿ ಭಂಗ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ವತಿಯಿಂದ ಪುತ್ತೂರು ನಗರ ಪೋಲಿಸ್ ಠಾಣೆಯಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಜರಂಗದಳ ಪುತ್ತೂರು ಜಿಲ್ಲಾ ಸಂಚಾಲಕ ಶ್ರೀಧರ್ ತೆಂಕಿಲ,ಬಜರಂಗದಳ ಪುತ್ತೂರು ಪ್ರಖಂಡ ಸಂಚಾಲಕ್ ಹರೀಶ್ ಕುಮಾರ್ ದೋಳ್ಪಾಡಿ,ಬಜರಂಗದಳ ಪುತ್ತೂರು ಪ್ರಖಂಡ ಸಹ ಸಂಚಾಲಕ್ ಜಯಂತ ಕುಂಜೂರು ಪಂಜ,ಜಿಲ್ಲಾ ಸಾಪ್ತಾಹಿಕ್ ಮಿಲನ್ ಪ್ರಮುಖ್ ಜೀತೆಶ್ ಬಲ್ನಾಡ್, ಪ್ರಖಂಡ ಸಾಪ್ತಾಹಿಕ ಮಿಲನ್ ಪ್ರಮುಖ್ ವಿಶಾಕ್ ಬಲ್ನಾಡ್,ನಗರ ಅಖಾಡ ಪ್ರಮುಖ್ ಹರ್ಷಿತ್ ಬಲ್ನಾಡ್,ಕಾರ್ಯಕರ್ತರಾದ ಚಂದ್ರ ಮುಕ್ವೆ,ದಿನೇಶ್ ತಿಂಗಳಾಡಿ,ಸಂಜಯ್ ಉಪಸ್ಥಿತರಿದ್ದರು