ಚಿತ್ರದುರ್ಗ, ಜನವರಿ 02: ಇಂದು ಬೆಳಗಿನ ಜಾವ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗದ ಗಾರೆಹಟ್ಟಿ ಬಡಾವಣೆಯಲ್ಲಿ ನಡೆದಿದೆ.
ಇಂದು ಬೆಳಗಿನ ಜಾವ ಮನೆಯೊಂದರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಮನೆಯಲ್ಲಿದ್ದ ಅರುಣಕುಮಾರ್ (43), ಲತಾ (35), ಅಮೃತಾ (13) ಬೆಂಕಿಯಲ್ಲಿ ಸಜೀವ ದಹನವಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದಾರೆ. ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಿಲಿಂಡರ್ ಸ್ಫೋಟಗೊಂಡಿರುವ ಶಂಕೆ ವ್ಯಕ್ತಗೊಂಡಿದೆ.