Sunday, February 2, 2025
ರಾಜಕೀಯ

ಮತ್ತೆ ಸಂಪು ವಿಸ್ತರಣೆ ಸದ್ದು: ಜನವರಿ 19ಕ್ಕೂ ಮುಂಚೆ ನಡೆಯುವ ಸಾಧ್ಯತೆ – ಕಹಳೆ ನ್ಯೂಸ್

ಬೆಂಗಳೂರು: ಧನುರ್ಮಾಸ ಹಾಗೂ ಮುಖ್ಯಮಂತ್ರಿ ವಿದೇಶಿ ಪ್ರವಾಸ ಸೇರಿದಂತೆ ನಾನಾ ಕಾರಣಗಳಿಂದ ಮುಂದೂಡಲಾಗಿದೆ ಎನ್ನಲಾಗುತ್ತಿದ್ದ ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತೆ ಸದ್ದು ಮಾಡುತ್ತಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ ಮುಗಿದ ಕೂಡಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಅನುಮೋದನೆ ಪಡೆಯಲು ದೆಹಲಿಗೆ ಪ್ರಯಾಣಿಸಲಿದ್ದಾರೆ ಎಂಬಂತಹ ಸುದ್ದಿಗಳು ಹರಿದಾಡುತ್ತಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಕರ ಸಂಕ್ರಾಂತಿ ಬಳಿಕ ಜನವರಿ 16 ಮತ್ತು 19ರ ನಡುವೆ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂಬಂತಹ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. ಜನವರಿ 14 ರಂದು ಧನುರ್ಮಾಸ ಕೊನೆಗೊಳ್ಳಲಿದ್ದು, ಜನವರಿ 15ಕ್ಕೆ ಮಕರ ಸಂಕ್ರಾಂತಿ ಹಬ್ಬವಿದೆ. ಮುಖ್ಯಮಂತ್ರಿ ವಿದೇಶಿ ಪ್ರವಾಸಕ್ಕೂ ಮುಂಚಿತವಾಗಿ ಸಂಪುಟ ವಿಸ್ತರಣೆಯಾಗಲಿದೆ ಎನ್ನಲಾಗುತ್ತಿದೆ.

ಕ್ಯಾಬಿನೆಟ್ ವಿಸ್ತರಣೆಯ ನಿಖರವಾದ ದಿನಾಂಕ ಮತ್ತು ಸಮಯವನ್ನು ಯಡಿಯೂರಪ್ಪ ರಹಸ್ಯವಾಗಿರಿಸುತ್ತಿದ್ದಾರೆ ಮತ್ತು ಇದು ಪಕ್ಷದೊಳಗಿನ ಅನೇಕರಿಗೆ ತಿಳಿದಿಲ್ಲ, ಜನವರಿ 20 ರೊಳಗೆ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಪಕ್ಷದೊಳಗಿನ ಮೂಲಗಳು ತಿಳಿಸಿವೆ.

ಉಪಮುಖ್ಯಮಂತ್ರಿ ಹುದ್ದೆ ಬಗ್ಗೆ ಅನೇಕರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಹುದ್ದೆ ಮೇಲೆ ಹಲವರು ಕಣ್ಣೀಟ್ಟಿರುವುದಕ್ಕೆ ಇದಕ್ಕೆ ಕಾರಣವಾಗಿದೆ. ಮೈತ್ರಿ ಸರ್ಕಾರದ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದ ರಮೇಶ್ ಜಾರಕಿಹೊಳಿ, ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಹಾಗೂ ಬಳ್ಳಾರಿಯ ಶ್ರೀರಾಮುಲು ಉಪಮುಖ್ಯಮಂತ್ರಿ ಆಕಾಂಕ್ಷಿಗಳಾಗಿದ್ದಾರೆ. ಇನ್ನೂ ಮೂರು ಡಿಸಿಎಂಗಳನ್ನು ಸೇರಿಸಿದರೆ ಅದು ತುಂಬಾ ಅಸಹ್ಯಕರವಾಗಿರುತ್ತದೆ ಎಂದು ಪಕ್ಷದೊಳಗಿನವರೇ ಹೇಳುತ್ತಾರೆ.

ಆಂಧ್ರಪ್ರದೇಶದಲ್ಲಿ ಐದು ಉಪಮುಖ್ಯಮಂತ್ರಿಗಳಿದ್ದಾರೆ. ಇವರು ಪ್ರಾದೇಶಿಕ ಪಕ್ಷವಾಗಿ ಕೆಲಸ ಮಾಡುತ್ತದೆ ಆದರೆ ಅದು ರಾಷ್ಟ್ರೀಯ ಪಕ್ಷವಲ್ಲ ಎಂದು ವೀಕ್ಷಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.