ದಿಲ್ಲಿಯ ಕಾರ್ಖಾನೆಯೊಂದರಲ್ಲಿ ಸ್ಫೋಟ: ಕಟ್ಟಡದಲ್ಲಿ ಬೆಂಕಿ, ಹಲವು ಮಂದಿ ಸಿಲುಕಿಕೊಂಡಿರುವ ಶಂಕೆ – ಕಹಳೆ ನ್ಯೂಸ್
ದಿಲ್ಲಿ, ಜ.2: ದಿಲ್ಲಿಯ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಬೆಂಕಿ ಹತ್ತಿಕೊಂಡ ಪರಿಣಾಮವಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಹಲವು ಮಂದಿ ಸಿಲುಕಿಕೊಂಡಿದ್ದಾರೆ.
ಮುಂಜಾನೆ 4: 23 ರ ಸುಮಾರಿಗೆ ದಿಲ್ಲಿಯ ಪೀರಾಗರಿಯ ಉದ್ಯೋಗ್ ನಗರದ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕರೆ ಬಂದಿದೆ. ಬೆಂಕಿಯಿಂದ ಉಂಟಾದ ಸ್ಫೋಟದಿಂದಾಗಿ ಅನೇಕರು ಕಟ್ಟಡದೊಳಗೆ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
35 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದೆ ಎಂದು ಮೂಲಗಳು ತಿಳಿಸಿವೆ.