ಮಡಿಕೇರಿ, ಜನವರಿ 03: ಶಾಲೆಗೆ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಘಟನೆ ಮಡಿಕೇರಿಯ ಸಿದ್ದಾಪುರ ಸಮೀಪದ ಇಂಜಲಗೆರೆಯಲ್ಲಿ ನಡೆದಿದೆ.
ಕೊಡಗಿನ ಕಾಫಿ ತೋಟದಲ್ಲಿ ಕಾಡಾನೆ ಅಸ್ವಸ್ಥ: ಜೀವನ್ಮರಣ ಸ್ಥಿತಿಯಲ್ಲಿ ಹೆಣ್ಣಾನೆ ಒದ್ದಾಟ
ಕಾಡಾನೆ ದಾಳಿಯಲ್ಲಿ ವಿದ್ಯಾರ್ಥಿನಿ ಯುವಶ್ರೀ ಗಂಭೀರವಾಗಿ ಗಾಯಗೊಂಡಿದ್ದಾಳೆ. ಅಮ್ಮತ್ತಿ ಆರ್.ಐ.ಎಚ್.ಪಿ ಆಸ್ಪತ್ರೆಗೆ ಈಕೆಯನ್ನು ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಈಕೆಯನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.
ಮತ್ತೊಬ್ಬ ವಿದ್ಯಾರ್ಥಿನಿ ನಿತ್ಯಶ್ರೀ ಕಾಲಿಗೆ ಗಾಯವಾಗಿದೆ. ಇವರಿಬ್ಬರೂ ಇಂಜಲಗರೆ ಸರಕಾರಿ ಶಾಲೆಯ ವಿದ್ಯಾರ್ಥಿಗಳು. ಇಂದು ಬೆಳಿಗ್ಗೆ ಶಾಲೆಗೆ ಇಬ್ಬರೂ ತೆರಳುತ್ತಿದ್ದ ಸಂದರ್ಭ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಈ ಘಟನೆ ನಡೆದ ನಂತರವೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡದೆ ಇರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.