ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ : ಬೇಡಿಕೆ ಇಡೇರುಸುಂತೆ ಒತ್ತಾಯಿಸಿದ ಕಾರ್ಯಕರ್ತೆಯರು – ಕಹಳೆ ನ್ಯೂಸ್
ಮಾಸಿಕ ಕನಿಷ್ಠ ಗೌರವಧನ 12 ಸಾವಿರ ನಿಗದಿಪಡಿಸಬೇಕು’ ಎಂಬುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಬೆಂಗಳೂರು ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಹಾವೇರಿ, ರಾಯಚೂರು, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬಂದಿರುವ ಕಾರ್ಯಕರ್ತೆಯರು ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದು ನಂತರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕುಳಿತು 15 ತಿಂಗಳುಗಳಿಂದ ಬಾಕಿ ಉಳಿಸಿಕೊಂಡಿರುವ ಪೆÇ್ರೀತ್ಸಾಹ ಧನವನ್ನು ಒಂದೇ ಬಾರಿ ಪಾವತಿಸಬೇಕು ಎಂದು ಕಾರ್ಯಕರ್ತೆಯರು ಒತ್ತಾಯಿಸುತ್ತಿದ್ದಾರೆ.
ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಿನ್ನಲೆಯಲ್ಲಿ ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೋತ್ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಸುಮಾರು 300 ಪೆÇಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. 5 ಕೆಎಸ್‍ಆರ್‍ಪಿ ತುಕಡಿ ಹಾಗೂ 3 ಸಿಎಆರ್ ತುಕಡಿಗಳು ಭದ್ರತೆಗೆ ನಿಯೋಜನೆ ಆಗಿದೆ.
ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಿಂದಾಗಿ ನಗರದ ಕೆ.ಆರ್.ಸರ್ಕಲ್, ನೃಪತುಂಗ ರಸ್ತೆ, ಮಲ್ಲೇಶ್ವರ, ಅರಮನೆ ರಸ್ತೆ, ಬಳ್ಳಾರಿ ರಸ್ತೆ, ಶೇμÁದ್ರಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ.