ಪೌರತ್ವ ತಿದ್ದುಪಡಿ ಕಾಯಿದೆಯ ಬಗ್ಗೆ ಅರಿವು ಮೂಡಿಸಲು ಸಮಾವೇಶ : ಕಲ್ಲಡ್ಕ ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆಯಲಿದೆ ಜನಜಾಗೃತಿ ಸಮಾವೇಶ – ಕಹಳೆ ನ್ಯೂಸ್
ಪೌರತ್ವ ತಿರುದ್ದಪಡಿ ಕಾಯಿದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಮುಗಿಲು ಮುಟ್ಟಿದೆ. ಅನೇಕರಿಗೆ ಈ ಪೌರತ್ವ ತಿದ್ದುಪಡಿ ಅಂದರೆ ಏನು..? ಇದರ ಪ್ರಯೋಜನವೇನು..? ಪೌರತ್ವ ತಿದ್ದುಪಡಿ ಕಾಯಿದೆ ಜನರ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತದೆ..? ಹೇಗೆ ಅನೇಕ ವಿಚಾರಗಳು ತಿಳಿದಿಲ್ಲ.
ಹೀಗಾಗಿ ಪೌರತ್ವ ತಿದ್ದುಪಡಿ ಕಾಯಿದೆಯ ಬಗ್ಗೆ ಜನರಿಗೆ ಅರಿವು ಮೂಡಿಸಬೇಕಾದ ಕಾರ್ಯವಾಗಬೇಕಾಗಿದೆ, ಈ ಹಿನ್ನೆಲೆಯಲ್ಲಿ ಅರಿವು ಮೂಡಿಸುವ ಸಲುವಾಗಿ, ಇದೇ ಬರುವ 5ರಂದು ರವಿವಾರ ಅಪರಾಹ್ನ 3 ಗಂಟೆಗೆ ಕಲ್ಲಡ್ಕ ಶ್ರೀ ರಾಮ ಭಜನಾ ಮಂದಿರದಲ್ಲಿ, ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಆಶ್ರಯದಲ್ಲಿ ಜನಜಾಗೃತಿ ಸಮಾವೇಶ ನಡೆಯಲಿದೆ.
ಕಾರ್ಯಕ್ರಮದಲ್ಲಿ ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಸಾಮರಸ್ಯ ಪ್ರಮುಖ್ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ, ಜಿಲ್ಲಾ ಸಾಹಿತ್ಯ ಪರಿಷತ್‍ನ ಕಾರ್ಯದರ್ಶಿ ಅಕ್ಷತಾ ಬಜ್ಪೆ, ಭಾಗವಹಿಸಲಿದ್ದಾರೆ.