Recent Posts

Sunday, January 19, 2025
ಸುದ್ದಿ

ಕೊನೆಗೂ ಪೊಲೀಸರ ಮುಂದೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಶರಣಾಗತಿ – ಕಹಳೆ ನ್ಯೂಸ್

ಬೆಂಗಳೂರು, ಫೆ 19: ಯುವಕನೊಬ್ಬನ ಮೇಲೆ ಗಂಭೀರ ಹಲ್ಲೆ ನಡೆಸಿ ಪರಾರಿಯಾಗಿದ್ದ ಶಾಸಕ ಹ್ಯಾರಿಸ್ ಪುತ್ರ ಪೊಲೀಸರಿಗೆ ಶರಣಾಗಿದ್ದಾನೆ.

ಶನಿವಾರ ರಾತ್ರಿ ಉದ್ಯಮಿ ಲೋಕ್‍ನಾಥ್ ಪುತ್ರ ವಿದ್ವತ್ ಜೊತೆ ಜಗಳವಾಡಿ ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಬಳಿಕ ನಲಪಾಡ್ ಪಾರಾರಿಯಾಗಿದ್ದನು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿ ಹ್ಯಾರಿಸ್ ಅವರ ಪುತ್ರ ಮಹಮ್ಮದ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಇಂದು ಬೆಳಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವಕ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವರದಿ : ಕಹಳೆ ನ್ಯೂಸ್