Thursday, January 23, 2025
ಸುದ್ದಿ

ನೀವು ಪಾಕಿಸ್ತಾನದ ರಾಯಭಾರಿಯೇ? ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ – ಕಹಳೆ ನ್ಯೂಸ್

ನೀವು ಪಾಕಿಸ್ತಾನದ ರಾಯಭಾರಿಯೇ? ಎಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇಂದು ಸಿಲಿಗುರಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ದೀದಿ, ಭಾರತದ ಬಗ್ಗೆ ಮಾತನಾಡುವ ಬದಲು ದಿನಪೂರ್ತಿ ಪಾಕಿಸ್ತಾನದ ಬಗ್ಗೆಯೇ ಮಾತನಾಡುತ್ತೀರಿ. ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ರಾಯಭಾರಿಯೇ ಎಂದು ಪ್ರಶ್ನಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನೀವು ಭಾರತದ ಬಗ್ಗೆ ಮಾತನಾಡುವ ಬದಲು, ಯಾಕೆ ಯಾವಾಗಲೂ ನಮ್ಮ ದೇಶವನ್ನು ಪಾಕಿಸ್ತಾನದ ಜೊತೆ ಹೋಲಿಸುತ್ತೀರಿ? ಪಾಕಿಸ್ತಾನದಂತಾಗಲು ನಾವೇನು ಬಯಸುವುದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ನಮ್ಮ ದೇಶವನ್ನು ನಾವು ಪ್ರೀತಿಸುತ್ತೇವೆ. ಅಲ್ಲಿನ ರಾಯಭಾರಿ ರೀತಿಯಲ್ಲಿ ದಿನಗಟ್ಟಲೇ ಪಾಕಿಸ್ತಾನದ ಬಗ್ಗೆಯೇ ಮೋದಿ ಮಾತನಾಡುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ವಾಗ್ದಾಳಿ ನಡೆಸಿದರು.

ಸ್ವಾತಂತ್ರ್ಯ ಬಂದು 70 ವರ್ಷದ ನಂತರ ದೇಶದ ಜನತೆ ತಮ್ಮ ಪೌರತ್ವವನ್ನು ಸಾಬೀತುಪಡಿಸಿಕೊಳ್ಳಬೇಕು ಎನ್ನುವುದು ನಾಚಿಕೆಗೇಡಿನ ಸಂಗತಿ ಎಂದು ದೀದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ನನಗೆ ಕೆಲಸವಿಲ್ಲ, ಉದ್ಯೋಗ ನೀಡಿ ಎಂದು ಯಾರಾದರೂ ಕೇಳಿದರೆ, ಅದಕ್ಕೆ ಪ್ರಧಾನಿ ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಾರೆ. ಕೈಗಾರಿಕೆಗಳಿಲ್ಲ ಎಂದು ಯಾರಾದರು ಹೇಳಿದರೆ, ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಾರೆ. ಪಾಕಿಸ್ತಾನದ ಬಗ್ಗೆ ಚರ್ಚೆಯನ್ನು ಪಾಕಿಸ್ತಾನ ಮಾಡುತ್ತದೆ. ನಾವು ಹಿಂದೂಸ್ತಾನದ ಬಗ್ಗೆ ಚರ್ಚೆ ಮಾಡೋಣ. ಇದು ನಮ್ಮ ಜನ್ಮಭೂಮಿ’ ಎಂದಿದ್ದಾರೆ.

‘ಸಂಸ್ಕøತಿ ಮತ್ತು ಪರಂಪರೆಯಿಂದ ಶ್ರೀಮಂತವಾಗಿರುವ ಭಾರತವನ್ನು ಯಾಕೆ ಸದಾ ಪಾಕಿಸ್ತಾನದೊಂದಿಗೆ ಹೋಲಿಸುತ್ತೀರಾ’ ಎಂದು ಮಮತಾ ಪ್ರಶ್ನಿಸಿದ್ದಾರೆ.

‘ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವುದು ಹೇಗೆ ಎಂದು ಅವರಿಗೆ ಚೆನ್ನಾಗಿ ಗೊತ್ತು. ಆದರೆ, ಜನರ ಸ್ವತಂತ್ರ್ಯವನ್ನು ಕಾಪಾಡುವುದೇ ನನ್ನ ಧರ್ಮ. ಇದು ನಮ್ಮ ಎರಡನೇ ಸ್ವಾತಂತ್ರ್ಯ ಹೋರಾಟ ಎಂದಿದ್ದಾರೆ.