Friday, January 24, 2025
ಸುದ್ದಿ

BREAKING NEWS.. ಕಡಬ ಅಪ್ರಾಪ್ತ ಬಾಲಕಿಯನ್ನು ತಡೆದು ನಿಲ್ಲಿಸಿ ಲೈಂಗಿಕ ಕಿರುಕುಳ-ಕಹಳೆ ನ್ಯೂಸ್

ಕಡಬ, ಜ.03. ಶಾಲೆ‌ ಬಿಟ್ಟು ಮನೆಗೆ ತೆರಳುತ್ತಿದ್ದ ಆರನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ತಡೆದು ನಿಲ್ಲಿಸಿ ಲೈಂಗಿಕ ಕಿರುಕುಳ ನೀಡೊದ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ನಡೆದಿದೆ.

ಕಡಬದ ಖಾಸಗಿ ಶಾಲೆಯೊಂದರ ಆರನೇ ತರಗತಿಯ ವಿದ್ಯಾರ್ಥಿನಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ದೋಳ್ಪಾಡಿ ನಿವಾಸಿ ರುಕ್ಮಯ್ಯ ಪೂಜಾರಿ ಎಂಬವರ ಪುತ್ರ ಲಿಂಗಪ್ಪ ಪೂಜಾರಿ ಎಂಬಾತ ರಸ್ತೆ ಮಧ್ಯದಲ್ಲಿ ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಬಾಲಕಿಯ ತಾಯಿಯು ಅದೇ ದಾರಿಯಿಂದಾಗಿ ಬರುತ್ತಿದ್ದುದನ್ನು ಕಂಡ ಆರೋಪಿಯು ಪರಾರಿಯಾಗಿದ್ದಾನೆ. ಈ ಬಗ್ಗೆ ಬಾಲಕಿಯು ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆಯಡಿ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು